ಕಾರವಾರ: ಬರಗಾಲ ಪೀಡಿತ ತಾಲೂಕು ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಜನಸಾಮಾನ್ಯರು ಕೆಲಸವಿಲ್ಲ ಎಂದು ವಲಸೆ ಹೋಗುವುದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳ ಮಾಹಿತಿ ನೀಡಲು "ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ" ಅಭಿಯಾನದಡಿ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಬೇಕು ಎಂದು ಅಂಕೋಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗ ಸುನೀಲ್ ಎಮ್ ಅವರು ತಿಳಿಸಿದ್ದಾರೆ.
ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮನದಟ್ಟು ಮಾಡುವ ನಿಟ್ಟಿನಲ್ಲಿ ಮನೆ ಮನೆ ಭೇಟಿ, ಜಾಗೃತಿ ವಾಹನಗಳ ಮೂಲಕ ಮಾಹಿತಿ ಪ್ರಸಾರ, ಜಾಥಾ, ಸಾರ್ವಜನಿಕ ಸ್ಥಳಗಳಲ್ಲಿ ರೋಜಗಾರ್ ದಿನಾಚರಣೆ, ಕಸ ವಿಲೇವಾರಿ ವಾಹನಗಳಲ್ಲಿ ಯೋಜನೆಯ ಜಿಂಗಲ್ಸ್‍ಗಳ ಪ್ರಸಾರ ಕೈಗೊಂಡು ಯೋಜನೆಯ ಮಾಹಿತಿ ನೀಡಬೇಕು ಎಂದರು.
ಪ್ರತಿ ಆರ್ಥಿಕ ವರ್ಷದಲ್ಲಿ 100 ದಿನಗಳ ಕೆಲಸ, ಹೆಣ್ಣು ಗಂಡಿಗೆ 316ರೂ. ಸಮಾನ ಕೂಲಿ, ಒಂದು ಕುಟುಂಬದ ಜೀವಿತಾವಧಿಗೆ ವೈಯಕ್ತಿಕ ಕಾಮಗಾರಿಗಳಿಗೆ 5ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. 60 ವರ್ಷ ಮೇಲ್ಪಟ್ಟವರು, ವಿಕಲಚೇತನರು, ಗರ್ಭಿಣಿಯರು, ಬಾಣಂತಿಯರಿಗೆ ಶೇ. 50 ರಷ್ಟು ವಿನಾಯಿತಿಯಲ್ಲಿ ಕೆಲಸ ನೀಡಲಾಗುವುದು.
ನರೇಗಾದಡಿ ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಯಡಿಯೂ ಸಾಕಷ್ಟು ಪ್ರಮಾಣದಲ್ಲಿ ಕಾಮಗಾರಿಗಳನ್ನು ನೀಡುತ್ತಿದ್ದು ಪ್ರತಿಯೊಬ್ಬರು ಇದರ ಸದುಪಯೋಗ ಪಡೆಯಬೇಕಿದೆ. ಪ್ರತಿಯೊಬ್ಬ ರೈತರು, ಪರಿಶಿಷ್ಟ್ಟ ಜಾತಿ ಮತ್ತು ಪಂಗಡದವರು ಉದ್ಯೋಗ ಚೀಟಿ ಹೊಂದುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‍ಗಳು ಕಾರ್ಯ ನಿರ್ವಹಿಸಬೇಕಿದೆ ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ