ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ಡಿ.03 ರಂದು ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ ಇವರ ಮಾರ್ಗದರ್ಶನದಲ್ಲಿ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕರಿಗಂಧ ಸ್ವಿಕರಿಸಿ, ಸ್ವಾಮಿ ಕೊರಗ ತನಿಯ ದೈವದ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಸೇವಾಕರ್ತರು ಗಳಾದ ಪೂಜ್ಯ ಮಾತಶ್ರೀ ವಿಮಲಾ ಹಾಗೂ ಶ್ರೀಮತಿ ವಿಜಯ ಭಾಸ್ಕರ ಬಂಗೇರ ಇವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ