ಕೊಟ್ಟಾರ ಚೌಕಿ ಸರ್ಕಲ್ ಗೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಡಾ.ಭರತ್ ಶೆಟ್ಟಿ ವೈ

Upayuktha
0


ಮಂಗಳೂರು: ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಹೆಸರು ಇಡಲಾಗುವುದು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.



ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.



ಉತ್ತಮ ಜೀವನಕ್ಕಾಗಿ ಲಕ್ಷಾಂತರ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯಸೇರಿ ದೇಶ ಸೇವೆ ಮಾಡುವ ಕ್ಯಾಪ್ಟನ್ ಪ್ರಾಂಜಲ್ ಅವರ‌ ನಿರ್ಧಾರ, ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ. ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ‌.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top