ಕುಂಟಿಕಾನ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಶ್ರೀಗುರುಭಿಕ್ಷಾ ಸೇವೆಯ ಉಗ್ರಾಣ ಮುಹೂರ್ತ ಶನಿವಾರ ಬೆಳಗ್ಗೆ ಜರಗಿತು. ಆಡಳಿತ ಮೊಕ್ತೇಸರ ಶಂಕರನಾರಾಯಣ ಭಟ್ ಶ್ರೀದೇವರ ಸನ್ನಿಧಿಯನ್ನು ಪ್ರಾರ್ಥಿಸಿ ಮುಹೂರ್ತ ನೆರವೇರಿಸಿದರು. ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ವಿ.ಬಿ.ಕುಳಮರ್ವ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ಯಾಂಭಟ್ ಕುಂಟಿಕಾನ ಮಠ, ಊರಪರವೂರ ಭಗವದ್ಭಕ್ತರು ಪಾಲ್ಗೊಂಡಿದ್ದರು. ನ.19 ಭಾನುವಾರ ಸಂಜೆ ಶ್ರೀ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಗಮನ, ನ.20ರಂದು ಸೋಮವಾರ ಭಿಕ್ಷಾಸೇವೆ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ