ಉಡುಪಿ: ನಮ್ಮ ಭಾಷೆಯನ್ನು ಪ್ರೀತಿಸಿ, ಅನ್ಯ ಭಾಷೆಯನ್ನು ಗೌರವಿಸಿ, ರಾಷ್ಟ್ರೀಯ ಐಕ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಭಾಷಾ ಸಾಮರಸ್ಯ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂಗ್ಲಭಾಷಾ ವಿಭಾಗದ ಸಹ ಪ್ರಾಧ್ಯಾಪಕ ಡಾ. ಶ್ರೀಧರ ಭಟ್ ನುಡಿದರು.
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಕಾಲೇಜಿನಲ್ಲಿ ನಡೆದ “ಭಾಷಾ ವೈವಿಧ್ಯತೆ ಮತ್ತು ಏಕತೆ” ಎಂಬ ವಿಚಾರದ ಬಗ್ಗೆ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು.
ಭಾಷೆ, ನೆಲ, ಸಂಸ್ಕøತಿ ವಿಷಯದಲ್ಲಿ ಭಾರತೀಯರಿಗೆ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿಯಿದ್ದು, ನಮ್ಮ ಕಲೆ, ಸಂಸ್ಕøತಿ, ಪರಂಪರೆಗಳನ್ನು ವಿಶ್ವಮಟ್ಟದಲ್ಲಿ ಸಾರುವುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ಪ್ರೊ. ಸುರೇಶ್ ರೈ ಕೆ. ತಿಳಿಸಿದರು.
ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಘವ ನಾಯ್ಕ ಕಾರ್ಯಕ್ರಮವನ್ನು ಆಯೋಜಿಸಿ, ನಿರೂಪಿಸಿ ಕೊನೆಯಲ್ಲಿ ವಂದನಾರ್ಪನೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ