ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಂದ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡ ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪನವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಹೇಳಿದರು.
ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಪದಗ್ರಹಣ ಸಮಾರಂಭದಲ್ಲಿ ನೂತನ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಶುಭ ಹಾರೈಸಿದ ನಂತರ "ಪಕ್ಷ ತಳಮಟ್ಟದಿಂದ ಮತ್ತೆ ಸದೃಢಗೊಳ್ಳಲಿದೆ, ಮುಂದಿನ ದಿನಗಳಲ್ಲಿ ಭಾರತೀಯ ಜನತಾ ಪಾರ್ಟಿ ಎಲ್ಲೆಡೆ ಅಭೂತಪೂರ್ವ ಯಶಸ್ಸು ಸಾಧಿಸಲಿದೆ ಎಂದು ಶಾಸಕರು ವಿಶ್ವಾಸ ವ್ಯಕ್ತಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ