ನೀರ್ಚಾಲು: ಇತ್ತೀಚೆಗೆ ಜಿ.ಜೆ.ಬಿ.ಎಸ್. ಪೇರಾಲ್ ಶಾಲೆಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಈ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಕಾರಡ್ಕದಲ್ಲಿ ಜರಗುವ ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇಲ್ಲಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಪ್ರೌಢಶಾಲಾ ಸಂಸ್ಕೃತೋತ್ಸವದಲ್ಲಿ 90 ಅಂಕ ಮತ್ತು ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತೋತ್ಸವದಲ್ಲಿ ಅತ್ಯಧಿಕ 88 ಅಂಕಗಳನ್ನು ಪಡೆದು ಚಾಂಪಿಯನ್ ಪಟ್ಟ, ಕಲೋತ್ಸವ ಪ್ರೌಢಶಾಲಾ ವಿಭಾಗದಲ್ಲಿ 167 ಅಂಕಗಳನ್ನು ಪಡೆದು ರನ್ನರ್ಸ್ ಅಪ್ ಪ್ರಶಸ್ತಿಯನ್ನು ನೀರ್ಚಾಲು ಶಾಲೆಯ ವಿದ್ಯಾರ್ಥಿಗಳು ಗಳಿಸಿದ್ದಾರೆ. ಈ ಮೂಲಕ ಕಲೋತ್ಸವದ ವಿವಿಧ ವಿಭಾಗಗಳಲ್ಲಿ ಮೂರು ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ