ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಮೈತ್ರಿ ಮುಟ್ಟಿನ ಕಪ್ ವಿತರಣೆ

Upayuktha
0


ಮುಂಡಾಜೆ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಆದೇಶದಂತೆ ಆರೋಗ್ಯ ಇಲಾಖೆ ಮತ್ತು ಮುಂಡಾಜೆ ಪದವಿ ಪೂರ್ವ ಕಾಲೇಜಿನ ಮಹಿಳಾ ಕೋಶದ ಜಂಟಿ ಆಶ್ರಯದಲ್ಲಿ ಮೈತ್ರಿ ಮುಟ್ಟಿನ ಕಪ್ಪು ವಿತರಣೆ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿಯವರು ಆಗಮಿಸಿ, ತಾಯಂದಿರು ಹಾಗೂ ವಿದ್ಯಾರ್ಥಿನಿಯರಿಗೆ ಮೈತ್ರಿ ಮುಟ್ಟಿನ ಕಪ್ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಶ್ರೀಮತಿ ಜಾಲಿ ಓ.ಎ. ವಹಿಸಿ ವಿದ್ಯಾರ್ಥಿನಿಯರಿಗೆ ನೈರ್ಮಲ್ಯದ ಬಗ್ಗೆ ತಿಳಿಸಿದರು.


ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಕುಮಾರಿ ರಮ್ಯಾ ಮತ್ತು ಕುಮಾರಿ ಶುಭಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ವಿದ್ಯಾರ್ಥಿನಿಯರಿಗೆ ಉಚಿತ ಮೈತ್ರಿ ಮುಟ್ಟಿನ ಕಪ್ ನ್ನು ವಿತರಿಸಲಾ ಯಿತು. ಮಹಿಳಾ ಕೋಶದ ಮುಖ್ಯಸ್ಥೆ ಶ್ರೀಮತಿ ಗೀತಾ ಸ್ವಾಗತಿಸಿ ಕನ್ನಡ ಉಪನ್ಯಾಸಕಿ ಶ್ರೀಮತಿ ವಸಂತಿ ಕಾರ್ಯಕ್ರಮ ನಿರ್ವಹಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಅವರ ತಾಯಂದಿರು ಮತ್ತು ಉಪನ್ಯಾಸಕಿಯರು ಉಪಸ್ಥಿತರಿದ್ದರು.


Post a Comment

0 Comments
Post a Comment (0)
To Top