ಮಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೌರ್ಜನ್ಯ ಪ್ರಕರಣಗಳಲ್ಲಿ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು. ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಬದಲು ಆರ್.ಡಿ. ಸಂಖ್ಯೆಯನ್ನು ಪಡೆದು ದೃಢೀಕರಿಸಿ ಪರಿಹಾರ ವಿತರಿಸಲು ಅವರು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಿದರು.
ತಾಲೂಕು ಮಟ್ಟದಲ್ಲಿ ಜಾಗೃತಿ ಸಮಿತಿ ಸಭೆಗಳನ್ನು ಪ್ರತೀ ತಿಂಗಳ 2ನೇ ಮಂಗಳವಾರ ನಡೆಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಯಗಳ ಅಹವಾಲುಗಳಿಗೆ ವಿಳಂಭವಿಲ್ಲದೇ ಸ್ಪಂದಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ದೌರ್ಜನ್ಯ ಪ್ರಕರಣಗಳಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ನೊಂದವರಿಗೆ ಸ್ಪಂದಿಸಬೇಕು. ಯಾವುದೇ ದೌರ್ಜನ್ಯ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸಬಾರದು. ಪರಿಹಾರ ನೀಡುವುದು ಮಾತ್ರ ಇಲಾಖೆಯ ಕೆಲಸವಾಗಬಾರದು ಎಂದು ತಿಳಿಸಿದರು.
ಜಾತಿ ಪ್ರಮಾಣ ಪತ್ರವನ್ನು ವಿಳಂಭವಿಲ್ಲದೆ ದೊರಕಿಸಿಕೊಡುವ ಕಾರ್ಯ ನಡೆಸಬೇಕು. ಸಕಾಲಕ್ಕೆ ಸಿಗದೇ ಇರುವುದರಿಂದ ಅನೇಕ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಈ ರೀತಿಯ ಪ್ರಕರಣಗಳ ಮುಂದೆಯೂ ನಡೆಯಬಾರದು ಎಂದು ಹೆಚ್ಚಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್, ಪಬ್ಲಿಕ್ ಪ್ರಾಸಿಕ್ಯೂಟರ್ ಜ್ಯೋತಿ ಹಾಗೂ ವಿವಿಧ ಇಲಾಖಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ