ಮಂಗಳೂರು: ನವಂಬರ್ 8ರಿಂದ 12ರವರೆಗೆ ಫಿಲಿಫೈನ್ಸ್‍ನ ಟಾರ್ಲಾಕ್‍ನಲ್ಲಿ ನಡೆದ 22ನೇ ಏಶಿಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಮಾಸ್ಟರ್ಸ್ ಅತ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಮೂಲಕ ಭಾರತವನ್ನು ಪ್ರತಿನಿಧಿಸಿದ್ದ ಗಿರಿಧರ ಸಾಲಿಯಾನ್ ಅವರು ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಅವರು ಮಂಗಳೂರು ಹಾಗೂ ಕಾರ್ಕಳದಲ್ಲಿರುವ ಕೆಜಿಟಿಟಿಐ ಸಂಸ್ಥೆಗಳ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2017ರಲ್ಲಿ ಚೀನಾದ ರುಗಾವೋದಲ್ಲಿ ನಡೆದ 20ನೇ ಏಶಿಯನ್ ಮಾಸ್ಟರ್ಸ್ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ 4ನೇ ಸ್ಥಾನ ಹಾಗೂ 2021ರಲ್ಲಿ ಮಲೇಶಿಯಾದ ಕುಚ್ಚಿಂಗ್‍ನಲ್ಲಿ ನಡೆದ 21ನೇ ಏಶಿಯನ್ ಮಾಸ್ಟರ್ಸ್ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ. ಪ್ರಸ್ತುತ ವರ್ಷದಲ್ಲಿ ಪೋಲಾಂಡ್‍ನ ಟೋರನ್‍ನಲ್ಲಿ ನಡೆದಿದ್ದ 9ನೇ ವಿಶ್ವ ಮಾಸ್ಟರ್ಸ್ ಅತ್ಲೆಟಿಕ್ಸ್ ಇಂಡೋರ್ ಚಾಂಪಿಯನ್ ಶಿಪ್‍ನ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ