ಫಲಾನುಭವಿಗಳ ಆಯ್ಕೆ ತ್ವರಿತಗೊಳಿಸಿ: ಅಲ್ಪಸಂಖ್ಯಾತರ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

Upayuktha
0

ಮಂಗಳೂರು: ಇಲಾಖೆಗೆ ಸಂಬಂಧಪಟ್ಟ ವಿವಿಧ ಯೋಜನೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಯೋಜನೆ ಲಾಭವನ್ನು ಸಾರ್ವಜನಿಕರಿಗೆ ಶೀಘ್ರವಾಗಿ ತಲುಪಿಸಲು ಅಲ್ಪಸಂಖ್ಯಾತರ ಇಲಾಖೆಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.


ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯಾದ ನಂತರ ನಿಯಮಾನುಸಾರ ಪರಿಶೀಲಿಸಿ ಫಲಾನುಭವಿಗಳ ಆಯ್ಕೆಯಾದ ಕಡೆತವನ್ನು ಸಲ್ಲಿಸಬೇಕು. ಫಲಾನುಭವಿಗಳ ಆಯ್ಕೆ ಪಟ್ಟಿಯೊಂದಿಗೆ  ವೈಟಿಂಗ್ ಲಿಸ್ಟ್ ಪಟ್ಟಿ ಕೂಡ ತಯಾರಿಸಬೇಕು. ಆಯ್ಕೆಯಾದ ಫಲಾನುಭವಿಗಳ ತಾಂತ್ರಿಕ ಕಾರಣಗಳಿಂದ ಅನರ್ಹಗೊಂಡರೆ ವೈಟಿಂಗ್ ಲಿಸ್ಟ್ ನಲ್ಲಿರುವ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


ವಿದ್ಯಾರ್ಥಿಗಳು ಇಲ್ಲದಿದ್ದರೂ ಕಡಬ ಪಟ್ಟಣದಲ್ಲಿ ಬಾಲಕಿಯರ ಹಾಸ್ಟೆಲ್ ಹೊಸ ಕಟ್ಟಡ ನಿರ್ಮಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ನೀಡಲು ಕ್ರಮ ಕೈಗೊಳುವಂತೆ ಸೂಚಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆ ಫಲಾನುಭವಿಗಳ ಪಟ್ಟಿಯನ್ನು ಕೂಡಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.


ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪ್ರವೇಶಾತಿ ಹೆಚ್ಚಳಕ್ಕೆ ಒತ್ತು ನೀಡಬೇಕು. ಹಾಸ್ಟೆಲ್‍ಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಗಮನಹರಿಸಬೇಕು ಎಂದು ಅವರು ನಿರ್ದೇಶಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ. ಆನಂದ್.ಕೆ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ, ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top