ಮಂಗಳೂರು ವಿವಿ: ಕೊಂಕಣಿ ಶಿಷ್ಯವೇತನಕ್ಕೆ ಅರ್ಜಿ ಅಹ್ವಾನ

Upayuktha
0

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದಿಂದ ಸಂಶೋಧನೆಯನ್ನು ಕೈಗೆತ್ತಿಕೊಳ್ಳಲು ಶಿಷ್ಯವೇತನಕ್ಕೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಶಿಷ್ಯವೇತನವು ಕೊಂಕಣಿ ಭಾಷೆ ಹಾಗೂ ಸಾಹಿತ್ಯ ಕುರಿತ ವಿಸ್ತೃತ ಸಂಶೋಧನೆಗೆ ಸಂಬಂಧಿಸಿದೆ. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊಂಕಣಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಈ ನೇಮಕಾತಿಯು ತಾತ್ಕಾಲಿಕ ನೆಲೆಯಲ್ಲಿದ್ದು, ಯೋಜನೆಯ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ.


ಸಂಶೋಧನಾ ಅನುಭವವುಳ್ಳವರಿಗೆ ಹಾಗೂ ಕೊಂಕಣಿ ಭಾಷೆ, ಸಾಹಿತ್ಯದಲ್ಲಿ ಆಳವಾದ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್ಸೈಟ್‌ ಅನ್ನು (https://www.mangaloreuniversity.ac.in/) ಹಾಗೂ ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್ (9110463225) ಅವರನ್ನು ಸಂಪರ್ಕಿಸಬಹುದಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top