ಮಂಗಳೂರು ವಿವಿ: ಪಿ.ಹೆಚ್.ಡಿ ಸೀಟುಗಳಿಗೆ ಅರ್ಜಿ ಆಹ್ವಾನ

Upayuktha
0



ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ  ಪಿ.ಹೆಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.




ಭರ್ತಿ ಮಾಡಿದ ಅರ್ಜಿಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು, ಹಂಪನಕಟ್ಟ ಇವರಿಂದ ರೂ. 1,100 ನ್ನು (ಎಸ್ಸಿ/ಎಸ್ಟಿ/ ಪ್ರವರ್ಗ-I ಅಭ್ಯರ್ಥಿಗಳು  ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ರೂ.550) ಚಲನ್/ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿವಿ ಇವರ ಹೆಸರಿನಲ್ಲಿ ಪಡೆದ  ಡಿ. ಡಿ. ಮುಖಾಂತರ ಪಾವತಿಸಿ ಪಡೆಯಬಹುದು.




ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ  ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ದಿನಾಂಕ 20.12.2023 ರ ಒಳಗೆ ಸಲ್ಲಿಸತಕ್ಕದ್ದು. ಖಾಲಿ ಇರುವ ಸೀಟುಗಳು/ ಮೀಸಲಾತಿ ವಿವರ ಮತ್ತು ಪಿಹೆಚ್.ಡಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಯಮಾವಳಿ ಹಾಗೂ ಮಾರ್ಗಸೂಚಿಯ ವಿವರಗಳು ಮತ್ತು ಅರ್ಜಿ ನಮೂನೆಗಳಿಗಾಗಿ ಮಂಗಳೂರು ವಿವಿಯ ವೆಬ್ ಸೈಟ್ - www.mangaloreuniversity.ac.in ಗೆ ಭೇಟಿ ನೀಡಬಹುದು, ಎಂದು ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top