ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಗುರುವಾರ ನಡೆಯಿತು. ಒಟ್ಟು 34 ಸ್ಥಾನಗಳ ಪೈಕಿ 25 ಸ್ಥಾನಗಳಿಗೆ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾದರು. ಉಳಿದ 9 ಸ್ಥಾನಗಳಿಗಷ್ಟೇ ಚುನಾವಣೆ ನಡೆಸಲಾಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿಕಾಂನ ಜೀವಿತ್ ಗಟ್ಟಿ, ಕಾರ್ಯದರ್ಶಿಯಾಗಿ ತೃತೀಯ ಬಿಕಾಂನ ಶಿವಪ್ರಸಾದ್ ರೈ ಟಿ., ಸಹಕಾರ್ಯದರ್ಶಿನಿ ಸ್ಥಾನಕ್ಕೆ ತೃತೀಯ ಬಿಎಸ್ಸಿಯ ಪ್ರಗತಿ, ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ಬಿಎಸ್ಸಿಯ ವಿಕಾಸ್ ರಾಜ್ ಒ., ಸಹಕಾರ್ಯದರ್ಶಿನಿಯಾಗಿ ತೃತೀಯ ಬಿ.ಎ. ವಿಭಾಗದ ಕೇಸರಿ ಆಯ್ಕೆಯಾದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ, ವಿದ್ಯಾರ್ಥಿ ಸಂಘದ ಸಹ ನಿರ್ದೇಶಕಿ ಪ್ರೊ. ಲತಾ ಎ. ಪಂಡಿತ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊ. ಕುಮಾರ ಸುಬ್ರಹ್ಮಣ್ಯ ಭಟ್, ಚುನಾವಣಾ ಅಧಿಕಾರಿ ಪ್ರೊ. ಜಯವಂತ ನಾಯಕ್, ಚುನಾವಣಾ ಫಲಿತಾಂಶ ನಿರ್ವಾಹಕ ಪ್ರೊ. ಗಣಪತಿ ಗೌಡ ಸೇರಿದಂತೆ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ನಿಧನರಾದ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಉಮಾನಾಥ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


