ಮಂಗಳೂರು: ನವೆಂಬರ್ 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ

Upayuktha
0


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ "ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ" ಕುರಿತು ನವೆಂಬರ್ 3 ಮತ್ತು 4 ರಂದು (ಶುಕ್ರವಾರ ಮತ್ತು ಶನಿವಾರ) ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿವೆ.


ಶುಕ್ರವಾರ ಬೆಳಗ್ಗೆ 10.30 ಕ್ಕೆ ಐಎಸ್‌ಇಸಿಯ ನಿವೃತ್ತ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ. ಜಿ.ಕೆ. ಕಾರಂತ್‌ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಯರಾಜ್‌ ಅಮೀನ್‌ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ.


ಸಮ್ಮೇಳನದ ಭಾಗವಾಗಿ ಸಂಪನ್ಮೂಲ ವ್ಯಕ್ತಿಗಳು ವಿವಿಧ ವಿಷಯಗಳ ಬಗ್ಗೆ ಗೋಷ್ಠಿ – ಸಂವಾದಗಳನ್ನು ನಡೆಸಿಕೊಡಲಿದ್ದಾರೆ.


ಶನಿವಾರ ಸಂಜೆ 3.30 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಬ್ರಹ್ಮಾವರದ ಎಸ್‌.ಎಂ.ಎಸ್‌ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ರವೀಂದ್ರನಾಥ್‌ ರಾವ್‌ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ರಾಜು. ಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, ಸಂಘಟನಾ ಕಾರ್ಯದರ್ಶಿ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಗಾಯತ್ರಿ ಎನ್ (99459 90963) ಅಥವಾ ಡಾ. ಕಿರಣ್‌ ಪ್ರಸಾದ್‌ (98801 19153) ಅವರನ್ನು ಸಂಪರ್ಕಿಸಬಹುದು, ಎಂದು ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top