ರಾಷ್ಟ್ರೀಯ ಸೇವಾ ಯೋಜನೆ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ : ಸೀಮಾ ಪ್ರಭು

Upayuktha
0



ಸುರತ್ಕಲ್‍: ಸೇವೆಗೆ ತಲೆಬಾಗಿದವರು ಗಣ್ಯ ವ್ಯಕ್ತಿಗಳಾಗಿ ಪ್ರಸಿದ್ಧರಾಗಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆ ನಮ್ಮಲ್ಲಿ ವ್ಯಕ್ತಿತ್ವ ನಿರ್ಮಾಣವನ್ನು ಮಾಡುತ್ತದೆ ಎಂದು ಉದ್ಘಾಟಕರಾದ 2021ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯಮಟ್ಟದ ಉತ್ತಮ ಯೋಜನಾಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸೀಮಾ ಪ್ರಭು ನುಡಿದರು. 


ಗೋವಿಂದ ದಾಸ ಕಾಲೇಜು ಸುರತ್ಕಲ್‍ನ ರಾಷ್ಟ್ರೀಯ ಸೇವಾಯೋಜನೆಯ 2023-24 ನೇ ಸಾಲಿನ ಸೇವಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.    



ಮುಖ್ಯ ಅತಿಥಿ ಗೋವಿಂದ ದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ರಮೇಶ್ ಕುಳಾಯಿ ಶುಭ ಹಾರೈಸಿದರು. 



ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೃಷ್ಣಮೂರ್ತಿ. ಪಿ ಮಾತನಾಡಿ ಸೇವಾ ಮನೋಭಾವ ಮೂಡಿಸುವ ರಾಷ್ಟ್ರೀಯ ಸೇವಾಯೋಜನೆಯಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿ ಕೊಳ್ಳಬೇಕೆಂದರು.

 


ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ, ರಾಷ್ಟ್ರೀಯ ಸೇವಾಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಜಿತಿನ್, ಮನೀಷ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ರಾಷ್ಟ್ರೀಯ ಯೋಜನಾಧಿಕಾರಿಗಳಾದ ಅಕ್ಷತಾ ವಿ. ಸ್ವಾಗತಿಸಿದರು. ನಿರ್ಮಿಕಾ ಅತಿಥಿ ಪರಿಚಯ ಮಾಡಿದರು. ಹಿತಾ ಉಮೇಶ್ ವಂದಿಸಿದರು. ಶರಣ್ಯ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನೆರವೇರಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top