ನ. 22 ಮತ್ತು 23 ರಂದು ಸಿದ್ಧವನ ಗುರುಕುಲದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ‍್ವರ ಕಾಲೇಜು (ಸ್ವಾಯತ್ತ), ಕನ್ನಡ ವಿಭಾಗ, ಡಾ. ಹಾಮಾನಾ ಸಂಶೋಧನಾ ಕೇಂದ್ರ, ಉಜಿರೆ ಹಾಗೂ ಭಾಷಾಂತರ ವಿಭಾಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ, ಭಾಷಾಂತರಕಾರರ ಒಕ್ಕೂಟ ಸಹಯೋಗದಲ್ಲಿ ಭಾಷಾಂತರಕಾರರ ತೃತೀಯ ಸಮಾವೇಶ ದಿನಾಂಕ 22 ಮತ್ತು 23 ನವೆಂಬರ್ 2023 ರಂದು ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ಎಂಬ ವಿಷಯದ ಮೇಲೆ ಸಿದ್ಧವನ ಗುರುಕುಲದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.



ವಿಚಾರ ಸಂಕಿರಣವನ್ನು ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ‍್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.



 ವಿಚಾರ ಸಂಕಿರಣದಲ್ಲಿ ಒಟ್ಟು ಆರು ಗೋಷ್ಠಿಗಳು ನಡೆಯಲಿದ್ದು. ದೇಶದ ವಿವಿಧ ಭಾಗಗಳಿಂದ ಸಂಪನ್ಮೂಲ ಪರಿಣಿತರು ಆಗಮಿಸಲಿದ್ದಾರೆ. ದಿನಾಂಕ 22. ಸಂಜೆ 6 ಗಂಟೆಗೆ ಉಜಿರೆ ಅಶೋಕ್ ಭಟ್ ಅವರ ನಿರ್ದೇಶನದಲ್ಲಿ `ಮೃತಸಂಜೀವನಿ’ ಎಂಬ ಯಕ್ಷಗಾನ ತಾಳಮದ್ದಳೆ ಪ್ರಸಂಗ ನಡೆಯಲಿದೆ.



ನವೆಂಬರ್ 23 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಪ್ರಸಿದ್ದ ವಿದ್ವಾಂಸರಾದ ಕೇಂದ್ರ ಸಾಹಿತ್ಯ ಅಕಾಡೆಮಿ ದೆಹಲಿಯ ಕಾರ್ಯದರ್ಶಿಗಳಾಗಿದ್ದ ಪ್ರೊ. ಅಗ್ರಹಾರ ಕೃಷ್ಣಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ. ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಹಾಗೂ ಕ.ವಿ.ವಿ. ಭಾ಼ಷಾಂತರ ಅಧ್ಯಯನದ ವಿಭಾಗದ ಮುಖ್ಯಸ್ಥರರಾದ ಡಾ. ಎ. ಮೋಹನ ಕುಂಟಾರ್ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top