ಉಡುಪಿ: ರಾಷ್ಟ್ರದ ಸ್ವಾತಂತ್ರ್ಯ ಮತ್ತು ಐಕ್ಯತೆಯನ್ನು ಬಲಪಡಿಸಲು, ದೇಶದಲ್ಲಿ ಹೆಚ್ಚುತ್ತಿರುವ ಅನೇಕ ರೀತಿಯ ಹಿಂಸೆಗಳನ್ನು ತಡೆಗಟ್ಟುವುದಕ್ಕಾಗಿ ರಾಜ್ಯ ಸರಕಾರದ ನಿರ್ದೇಶನದಂತೆ “ರಾಷ್ಟ್ರೀಯ ಐಕ್ಯತಾ ಸಪ್ತಾಹ”ವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ಉದ್ಘಾಟಿಸಲಾಯಿತು. ಈ ಸಪ್ತಾಹವು ನ. 19 ರಿಂದ 25ರ ವರೆಗೆ ನಡೆಯಲಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. “ಜಾಗತೀಕರಣ, ಖಾಸಗೀಕರಣದ ಇಂದಿನ ದಿನಗಳಲ್ಲಿ ನಾವು ದೇಶದ ಐಕ್ಯತೆ, ಸಮಗ್ರತೆಗಳನ್ನು ಕಾಪಾಡಿಕೊಂಡು ದೇಶವನ್ನು ಮುನ್ನಡೆಸುವ ಗುರುತರ ಹೊಣೆಗಾರಿಕೆಯಿದೆ. ಸಂವಿಧಾನದಲ್ಲಿ ನಂಬಿಕೆ ಇಟ್ಟು ಗೌರವ ನೀಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸಬೇಕಾಗಿದೆ. ಐಕ್ಯತೆ ಹಾಗೂ ಸಮಗ್ರತೆಯಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದರು.
ಮೊದಲ ದಿನ “ಐಕ್ಯತೆ, ಯುವ ಜನತೆ ಮತ್ತು ರಾಷ್ಟ್ರೀಯತೆ” ಎಂಬ ವಿಚಾರದ ಬಗ್ಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರೂ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಆದ ಡಾ. ರೋಶನ್ ಕುಮಾರ್ ಶೆಟ್ಟಿ ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಐಕ್ಯತೆಯ ಪ್ರಮಾಣ ವಚನ ಬೋಧಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ. ಕಾರ್ಯಕ್ರಮ ಆಯೋಜಿಸಿ, ನಿರೂಪಿಸಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ