ನ. 29: ಉಜಿರೆಯಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್ ಪಂದ್ಯಕೂಟ

Upayuktha
0


ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಜಂಟಿ ಆಶ್ರಯದಲ್ಲಿ ಮಂಗಳೂರು ವಿವಿ ಅಂತರ್ ಕಾಲೇಜು (ಅಂತರ್ ವಲಯ) ಪುರುಷರ ವಾಲಿಬಾಲ್ ಪಂದ್ಯ ಕೂಟವು (ಶ್ರೀ ಪಾಟೀಲ್ ಸವ್ಕೂರ್ ಅಂತಯ್ಯ ಶೆಟ್ಟಿ ಸ್ಮಾರಕ ಟ್ರೋಫಿ) ನ. 29 ರಂದು ಉಜಿರೆಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.


 


ಬೆಳಗ್ಗೆ 9.30ಕ್ಕೆ ಉದ್ಘಾಟನ ಸಮಾರಂಭ ನಡೆಯಲಿದ್ದು, ಸೌತ್ ವೆಸ್ಟರ್ನ್ ರೈಲ್ವೇಯ ಮುಖ್ಯ ಟಿಕೆಟ್ ಇನ್ಸ್ಪೆಕ್ಟರ್ (ಸೌತ್ ಏಷಿಯನ್ ಗೇಮ್ 110 ಹರ್ಡಲ್ಸ್ ಬೆಳ್ಳಿ ಪದಕ ವಿಜೇತ) ಯೇಸುದಾಸ್ ಪಿ.ಟಿ. ಉದ್ಘಾಟಿಸಲಿದ್ದಾರೆ. ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಉಜಿರೆ ಶ್ರೀ ಧ. ಮಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.


 


ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜಾ ಹಾಗೂ ಉಜಿರೆ ಶ್ರೀ ಧ. ಮಂ. ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಬಾಲಭಾಸ್ಕರ್ ಕೆ. ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.


 


ಪಂದ್ಯಕೂಟದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಎಂಟು ತಂಡಗಳು ಪಾಲ್ಗೊಳ್ಳಲಿವೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್ ಎಚ್. ಹಾಗೂ ಶಾರದಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter                 


Post a Comment

0 Comments
Post a Comment (0)
To Top