ನ.29: ಮಾಣಿ ಸಂಸ್ಥೆಯ ವಾರ್ಷಿಕ ಸ್ಕೌಟ್ಸ್ -ಗೈಡ್ಸ್ ಹಾಗೂ ಕಬ್ಸ್, ಬುಲ್ -ಬುಲ್ಸ್ ಉತ್ಸವ

Upayuktha
0






ಮಾಣಿ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ 15 ನೇ ವರ್ಷದ ವಾರ್ಷಿಕ ಸ್ಕೌಟ್ಸ್ -ಗೈಡ್ಸ್ ಹಾಗೂ ಕಬ್ಸ್, ಬುಲ್ -ಬುಲ್ಸ್ ಉತ್ಸವ ಬಂಟ್ವಾಳ ತಾಲೂಕಿನ ದ. ಕ. ಜಿ. ಪಂ. ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಇದರ ಆತಿಥ್ಯದಲ್ಲಿ ನ. 29 ರಂದು ಬುಧವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ.



ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೆಟ್ಲ ಮೂಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಮಿತಾ.ಡಿ ಪೂಜಾರಿ, ಸದಸ್ಯರಾದ ಧನಂಜಯ ಗೌಡ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥನ್.ಎಂ. ಜಿ, ಬಂಟ್ವಾಳ ಸ್ಕೌಟ್ಸ್ ಗೈಡ್ಸ್ ಒಕ್ಕೂಟದ ಅಧ್ಯಕ್ಷರಾದ ರೊಟೇರಿಯನ್ ಪ್ರಕಾಶ್ ಕಾರಂತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್ ಮೊದಲಾದವರು ಭಾಗವಹಿಸಲಿದ್ದಾರೆ.




ಮಧ್ಯಾಹ್ನದ ನಂತರ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸಚ್ಚಿದಾನಂದ, ಸದಸ್ಯರಾದ ಶಕೀಲಾ ಕೃಷ್ಣ ಮಿತ್ತ ಕೋಡಿ, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾಳ್.ಕೆ.ಎಸ್, ಭಾರತ್ ಸ್ಕೌಟ್ಸ್ - ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಕಜೆ, ಕಲ್ಲಡ್ಕ ವಲಯ ಶಿಕ್ಷಣ ಸಂಯೋಜಕರಾದ ಪ್ರತಿಮಾ ವೈ. ವಿ ಮೊದಲಾದವರು ಉಪಸ್ಥಿತಲಿರಲಿದ್ದಾರೆ.




ಕಾರ್ಯಕ್ರಮದಲ್ಲಿ ಹಿರಿಯ ಪ್ರಸೂತಿ ಪರಿಣತೆ ಪೂವಕ್ಕ ಪೂಂಜ ಕರಿಂಕ ಹೊಸವಕ್ಲು, ಡಾ. ಅಶ್ವಿನ್ ಆಳ್ವ ಗ್ಯಾಸ್ಟ್ರೋ ಸರ್ಜನ್ ಕರಿಂಕ ಹೊಸ ಮನೆ, ಭಾರತೀಯ ಸೇನೆಯ ನಿವೃತ್ತ ಯೋಧರಾದ ಮೋಹನ್ ಗೌಡ ಕೊಂಕಣ ಕೋಡಿ ಮೊದಲಾದವರನ್ನು ಗೌರವಿಸಲಾಗುವುದು ಎಂದು ಸ್ಕೌಟ್ಸ್ -ಗೈಡ್ಸ್ ನಿರ್ದೇಶಕರಾದ ಏಮಾಜೆ ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿಯರು ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top