ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಮಂಗಳೂರಿನ ಮೀಡಿಯಾ ಆಲಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ಸಹಯೋಗದಲ್ಲಿ ‘ಹೈಪರ್ ಲೋಕಲ್ ಮೀಡಿಯಾ: ಆಪರೇಶನ್ ಆ್ಯಂಡ್ ಸಸ್ಟೇನೇಬಿಲಿಟಿ’ ಕುರಿತ ರಾಜ್ಯಮಟ್ಟದ ಕಾರ್ಯಾಗಾರವು ನ. 29ರಂದು ಕಾಲೇಜಿನ ಸೆಮಿನಾರ್ ಹಾಲ್’ನಲ್ಲಿ ನಡೆಯಲಿದೆ.
ಸುದ್ದಿ ಬಿಡುಗಡೆ ವಾರಪತ್ರಿಕೆಯ ಸಂಪಾದಕ ಹಾಗೂ ಸುದ್ದಿ ಗ್ರೂಪ್ ಆಫ್ ಕಂಪನೀಸ್ ಅಧ್ಯಕ್ಷ ಡಾ. ಯು.ಪಿ. ಶಿವಾನಂದ ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಮಾಮ್ ಸಂಘಟನೆಯ ಅಧ್ಯಕ್ಷ ನವೀನ್ ಅಮ್ಮೆಂಬಳ ಹಾಗೂ ಗೌರವಾಧ್ಯಕ್ಷ ವೇಣು ಶರ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಉಪಸ್ಥಿತರಿರಲಿದ್ದಾರೆ.
ಅಪರಾಹ್ನ 3.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ