ಓಬವ್ವ ಸಾಹಸ ಸ್ಮರಣೀಯ: ಶಾಸಕ ವೇದವ್ಯಾಸ ಕಾಮತ್

Chandrashekhara Kulamarva
0


ಮಂಗಳೂರು: ಪುರುಷ ಪ್ರಧಾನ ಸಮಾಜವಾಗಿದ್ದ 18ನೇ ಶತಮಾನದಲ್ಲಿ ವೈರಿ ಪಡೆಯನ್ನು ದಿಟ್ಟವಾಗಿ ಎದುರಿಸಿದ ಒನಕೆ ಓಬವ್ವಳು ದೇಶ ಕಂಡ ಅನುಕರಣೀಯ ಆಡಳಿತಗಾರಳು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.


ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಾರ್ ಸ್ಟ್ರೀಟ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಒನಕೆಯನ್ನೇ ಅಸ್ತ್ರವಾಗಿಟ್ಟು ಹೋರಾಡಿದ ಓಬವ್ವ ಮಹಿಳಾ ಸಮುದಾಯಕ್ಕೆ ಮಾದರಿಯಾಗಿದ್ದಾರೆ ಎಂದು ಶಾಸಕರು ಹೇಳಿದರು.

ಆಳ್ವಾಸ್ ಕಾಲೇಜಿನ ಉಪನ್ಯಾಸಕ ಡಾ. ಯೋಗೀಶ್ ಕೈರೋಡಿ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲೆ ಭಾರತೀಬಾಯಿ ಉಪಸ್ಥಿತರಿದ್ದರು. ವಾರುಣಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top