ನಮ್ಮ ರಾಷ್ಟ್ರ ಉನ್ನತ ಕ್ರೀಡಾ ಸಾಧನೆಗೈಯುತ್ತಿದೆ: ಪ್ರಕಾಶ್ ಶೆಟ್ಟಿ

Upayuktha
0


ಸುರತ್ಕಲ್
: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಕ್ರೀಡಾವಕಾಶಗಳು ದೊರಕಿ ಉನ್ನತ ಕ್ರೀಡಾ ಸಾಧನೆಗಳನ್ನು ಮಾಡಬಹುದಾಗಿದೆ. ಪ್ರಸಕ್ತ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿದ್ದು ನಮ್ಮ ರಾಷ್ಟ್ರ ಉನ್ನತ ಕ್ರೀಡಾ ಸಾಧನೆಗೈಯುತ್ತಿದೆ ಎಂದು ರಾಷ್ಟ್ರಮಟ್ಟದ ಹಿರಿಯ ಅತ್ಲೆಟಿಕ್ಸ್ ಹಾಗೂ ವಾಲಿಬಾಲ್ ಕ್ರೀಡಾಪಟು ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಪ್ರಕಾಶ್ ಶೆಟ್ಟಿ ನುಡಿದರು.




ಅವರು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ., ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಲು ವಿದ್ಯಾಸಂಸ್ಥೆಗಳ ಪ್ರೋತ್ಸಾಹ ಅತ್ಯಗತ್ಯವಾಗಿದ್ದು ಗೋವಿಂದ ದಾಸ ಕಾಲೇಜು ಕ್ರೀಡಾ ಪಟುಗಳಗಳಿಗೆ ಬೇಕಾದ ತರಬೇತಿಗಳನ್ನು ನಿರಂತರವಾಗಿ ನೀಡುತ್ತಿದೆ ಎಂದರು.




ಉಪಪ್ರಾಚಾರ್ಯ ಪ್ರೊ. ರಮೇಶ್ ಭಟ್ ಎಸ್.ಜಿ. ಶುಭ ಹಾರೈಸಿದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.  ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್ ಎಂ.ಡಿ. ಅತಿಥಿಗಳನ್ನು ಪರಿಚಯಿಸಿದರು.  ಶಮಾ ಫರ್ಹಾನ ಸ್ವಾಗತಿಸಿ ಮೇಘ ವಂದಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಪ್ರಥಮ್ ಸಿ ಕೋಟ್ಯಾನ್  ಪ್ರತಿಜ್ಞಾವಿಧಿ ಬೋಧಿಸಿದರು. 




ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಹರೀಶ ಆಚಾರ್ಯ ಪಿ. ಐಶೆ ಸಂಯೋಜಕ ಪ್ರೊ. ವಾಮನ ಕಾಮತ್ ಸ್ಟಾಫ್ ಅಸೋಸಿಯೇಶನ್ ಕಾರ್ಯದರ್ಶಿ ಗೀತಾ ಕೆ ಮತ್ತಿತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top