ಡಾ. ಬಿ. ಯಶೋವರ್ಮ ಸ್ಮರಣಾರ್ಥ ರಾಜ್ಯ ಮಟ್ಟದ ಕವಿಗೋಷ್ಠಿ: ಕವನಗಳಿಗೆ ಆಹ್ವಾನ

Upayuktha
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ಸಂಘದ ಸಹಯೋಗದಲ್ಲಿ ನಾಡಿನ ಹೆಸರಾಂತ ಶಿಕ್ಷಣ ತಜ್ಞ, ಸಾಹಿತ್ಯ, ಸಂಗೀತ, ಲಲಿತಕಲೆಗಳ ಪೋಷಕರಾಗಿದ್ದ ಡಾ. ಬಿ. ಯಶೋವರ್ಮ ಅವರ ನೆನಪಿಗಾಗಿ ಅವರ ವ್ಯಕ್ತಿತ್ವ, ಸಾಹಿತ್ಯ ಸಂಸ್ಕೃತಿ ಪರಿಚಾರಿಕೆಗಳ ಕುರಿತು ರಾಜ್ಯ ಮಟ್ಟದ ಕವಿಗೋಷ್ಠಿಯನ್ನು ಡಿ.5ರಂದು ನಡೆಸಲು ಉದ್ದೇಶಿಸಲಾಗಿದೆ.


ಈ ಕವಿಗೋಷ್ಠಿಗೆ ಕವನಗಳನ್ನು ಆಹ್ವಾನಿಸಲಾಗಿದ್ದು, ಕವನವು ಕನ್ನಡ/ ತುಳು ಭಾಷೆಯಲ್ಲಿ ಇರಬಹುದಾಗಿದೆ. ಕವನ ವಾಚಿಸಲು 3 ನಿಮಿಷಗಳ ಕಾಲಾವಕಾಶವಿದೆ. ಈ ಗೋಷ್ಠಿಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಸಾಹಿತ್ಯಾಭಿಮಾನಿಗಳು- ಯಾರು ಬೇಕಾದರೂ ಭಾಗವಹಿಸಬಹುದಾಗಿದೆ.


ಆಸಕ್ತರು ತಮ್ಮ ಸ್ವರಚಿತ ಕವನವನ್ನು ನ.22ರ ಮೊದಲು ಕಳುಹಿಸುವಂತೆ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಪ್ರಕಟಣೆಯಲ್ಲಿ ಕೋರಿದ್ದಾರೆ.


ಕವನಗಳನ್ನು ಕಳುಹಿಸಬೇಕಾದ ವಿಳಾಸ:

ಡಾ. ಎಂ.ಪಿ. ಶ್ರೀನಾಥ, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಎಸ್‌ಡಿಎಂ ಕಾಲೇಜು ಉಜಿರೆ- 574240,  (ಸಂಪರ್ಕ- 9448558583) ಅಥವಾ ಡಾ. ಮಾಧವ ಎಂ.ಕೆ., ಮುಖ್ಯಸ್ಥರು, ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು (ಸಂಪರ್ಕ: 9481270577).


ಆಯ್ಕೆಯಾದವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top