ನವೆಂಬರ್ 4ರಂದು ಅಂಬಿಕಾ ಮಹಾವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ

Upayuktha
0



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರಿನ ಜಿ.ಎಂ.ಎಸ್.ಅಟೋರಿಕ್ಷಾ ಚಾಲಕ – ಮಾಲಕರ ಸಂಘದ ಸಂಯುಕ್ತಾಶ್ರಯದಲ್ಲಿ ಸುವರ್ಣ ಕರ್ನಾಟಕ -  ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 4ರಂದು ಅಂಬಿಕಾ ಮಹಾವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್‍ನ ವೈದ್ಯಾಧಿಕಾರಿ ಡಾ.ರಾಮಚಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಜಿ.ಎಂ.ಎಸ್.ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ರಾಜೇಶ್ ಕೆ.ಮರೀಲ್, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಉಪಸ್ಥಿತರಿರುವರು. 


ರಕ್ತದಾನ ಮಾಡುವುದಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದ್ದು ದಾನಿಗಳು 8105651110 ಅಥವ 8971458570 ಸಂಖ್ಯೆಗೆ ಕರೆಮಾಡಿ ತಮ್ಮ ಆಗಮನವನ್ನು ಖಚಿತಪಡಿಸುವಂತೆ ವಿನಂತಿಸಲಾಗಿದೆ. ರಕ್ತದಾನ ಶಿಬಿರವು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top