ಪತ್ರಿಕೋದ್ಯದಲ್ಲಿ ಪ್ರಾಯೋಗಿಕವಾಗಿ ತೊಡಗಿಸಿಕೊಂಡಾಗ ಮಾತ್ರಗುರಿತಲುಪಲು ಸಾಧ್ಯ: ರಾಕೇಶ್ ನಾಯಕ್

Upayuktha
0


ಪುತ್ತೂರು: ಪತ್ರಿಕೋದ್ಯಮ ಶಿಕ್ಷಣ ಅಂದ್ರೇನೆ ವಿಭಿನ್ನ, ಇಲ್ಲಿ ಪ್ರಾಯೋಗಿಕವಾಗಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ9 ವೆಬ್ಸೈಟ್‌ನ ಉಪ ಸಂಪಾದಕ ರಾಕೇಶ್ ನಾಯಕ್ ಹೇಳಿದರು. 


ಇವರು ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ ಮೊದಲ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಮಾತನಾಡಿದರು.


ಮಾಧ್ಯಮ ಲೋಕದಲ್ಲಿ ಹಲವಾರು ಅವಕಾಶಗಳಿವೆ, ಅದರಲ್ಲಿಯೂ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಸಾಧ್ಯತೆಗಳಿವೆ. ಜೋತೆಗೆ ಅನೇಕ ಪ್ರಚಲಿತ ಸುದ್ದಿಗಳಿಗೆ ಗಮನ ಹರಿಸುವುದು ಮುಖ್ಯ. ವೃತ್ತಿ ಜೀವನ ಇಲ್ಲಿ ಆರಂಭಿಸಿದರೆ ನಮ್ಮ ಬರವಣಿಗೆ, ಆಲೋಚನಾ ಶಕ್ತಿ ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬಹುದು ಎಂದು ತಿಳಿಸುವುದರ ಜೊತೆಗೆ ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು. 


ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದಉಪನ್ಯಾಸಕಿ ಶ್ರೀಪ್ರಿಯ ಪಿ, ಸುತನ್ ಕೇವಳ ಉಪಸ್ಥಿತರಿದ್ದರು. 


ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ನೀತರವೀಂದ್ರ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter   

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top