ಉಡುಪಿ: ನಾವು ಬದುಕುತ್ತಿರುವ ಸಮಾಜದ ನಡುವಿನ ನಮ್ಮ ಇರವನ್ನು ಅರಿವಿಗೆ ತರುವಂತಿರುವ ಓದು ಮಾತ್ರವೇ ನಾವು ಬದುಕುತ್ತಿರುವ ಸಮಾಜದ ಸರಿಯಾದ ತಿಳುವಳಿಕೆಯನ್ನು ಮೂಡಿಸಬಲ್ಲದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕರೂ, ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಸಂಸ್ಥೆ, ಮೈಸೂರು ಇದರ ನಿಕಟಪೂರ್ವ ಯೋಜನಾ ನಿರ್ದೇಶಕರಾದ ಪ್ರೊ. ಬಿ. ಶಿವರಾಮ ಶೆಟ್ಟಿಯವರು ಹೇಳಿದರು.
ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗವು ಆಯೋಜಿಸಿದ ಹಳೆಗನ್ನಡ ಕಾವ್ಯದ ಓದಿನ ಕಮ್ಮಟವಾದ “ಕಬ್ಬದುಳುಮೆ”ಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರೂ, ಚಳುವಳಿಗಳ ಸಂಗಾತಿಯೂ ಎನಿಸಿದ ಚಿಂತಕ ಲಕ್ಷ್ಮೀಪತಿ ಕೋಲಾರ ಅವರು ಉಪಸ್ಥಿತರಿದ್ದು, ಕಾಲೇಜು ವತಿಯಿಂದ ಸನ್ಮಾನವನ್ನು ಸ್ವೀಕರಿಸಿ ಶುಭ ಹಾರೈಸಿದರು.
ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿ ಕಬ್ಬದುಳುಮೆಯ ಕಾರ್ಯ ಯೋಜನೆಯ ಸ್ವರೂಪವನ್ನು ಪರಿಚಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ವಹಿಸಿದ್ದರು.
ತೆಂಕನಿಡಿಯೂರು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ವಿಶ್ವನಾಥ ಕರಬ ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರತ್ನಮಾಲಾ ಉಪಸ್ಥಿತರಿದ್ದರು. ರತ್ನಾಕರ ವರ್ಣಿಯ ಭರತೇಶ ವೈಭವದ ಸ್ತುತಿ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಶರಿತಾ ವಂದಿಸಿ, ಸಹ ಪ್ರಾಧ್ಯಪಕರಾದ ಶ್ರೀ ರಾಧಾಕೃಷ್ಣ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ