ಶ್ರೀ ವಿಠೋಬ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹ ಆರಂಭ
ಮಂಗಳೂರು: ಮಂಗಳೂರಿನ ವಿ.ಟಿ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದಲ್ಲಿ ಇಂದು (ನ.17) ಆರಂಭವಾಗಿರುವ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಸಪ್ತಾಹದ ಸಂತೆಗೆ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಕೃಷ್ಣ ಶೆಣೈ ಅವರು, ಕಳೆದ ಐದು ವರ್ಷಗಳಿಂದ ಸಪ್ತಾ ಸಾಂತ್ ನಡೆಸಿಕೊಂಡು ಬರುತ್ತಿದ್ದೇವೆ. ಮನೆಗಳಲ್ಲಿ ತಯಾರಿಸುವ ಉಪ್ಪಿನಕಾಯಿ, ಹಪ್ಪಳ, ಸಾಂಬಾರು ಪೌಡರ್, ಕೈಚೀಲಗಳು, ಬಟ್ಟೆಬರೆ, ಗಿಡಮೂಲಿಕೆಗಳಿಂದ ತಯಾರಿಸುವ ಆರೋಗ್ಯಭರಿತ ವಸ್ತುಗಳು, ಅಡಿಕೆ ಸಾಬೂನು, ಒಂದು ಗ್ರಾಂ ಆಭರಣಗಳು, ಆರೋಗ್ಯಕರ ಪೇಯಗಳು ಸಹಿತ ವಿಭಿನ್ನ ವಸ್ತುಗಳನ್ನು ಇಲ್ಲಿ ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದೆ. ಇದನ್ನು ಖರೀದಿಸಿ ಗೃಹ ಉತ್ಪನ್ನ ಮತ್ತು ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕಾಗಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಒಂದು ವಾರದ ತನಕ ನಡೆಯುವ ಈ ಸಂತೆಯಲ್ಲಿ ಕರಾವಳಿಯ ವಿವಿಧ ಭಾಗಗಳ ಕಿರು ಉದ್ಯಮಿಗಳು ಮನೆಯಲ್ಲಿಯೇ ತಯಾರಿಸಿದ ಶುದ್ಧ, ಸಾವಯವ ವಸ್ತುಗಳನ್ನು ಖರೀದಿಸುವ ಅವಕಾಶ ಸಾರ್ವಜನಿಕರಿಗೆ ಇದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಡಿಗೆ ಕೃಷ್ಣ ಶೆಣೈಯವರೊಂದಿಗೆ ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ವಿಠೋಭ ಶೆಣೈ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಸಂತೆ ನವೆಂಬರ್ 23 ತಾರೀಕಿನ ವರೆಗೆ ನಿತ್ಯ ಬೆಳಿಗ್ಗೆ 9.30 ರಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ