ಉಜಿರೆ: ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಬಿಬಿಎ ವಿಭಾಗದ ವತಿಯಿಂದ ಅಂತರ್- ತರಗತಿ ಸ್ಪರ್ಧೆ ‘ಏಕತ್ವಂ – 2K23’ ನ. 6 ರಂದು ನಡೆಯಿತು. ಮುಖ್ಯ ಅತಿಥಿ, ನವೋದ್ಯಮಿ ರತೀಶ್ ಉದ್ಘಾಟನೆ ನೆರವೇರಿಸಿ, “ಪಠ್ಯ ಚಟುವಟಿಕೆಗಳ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಳ್ಗೊಳ್ಳುವುದು ಮುಖ್ಯ. ಸ್ಪರ್ಧೆಗಳಲ್ಲಿ ಗೆಲುವಿಗಿಂತಲೂ ಭಾಗವಹಿಸುವುದು ಅಗತ್ಯ” ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ., ಕಾರ್ಯಕ್ರಮ ಸಂಯೋಜಕ- ಸಹಾಯಕ ಪ್ರಾಧ್ಯಾಪಕ ಶರಶ್ಚಂದ್ರ ಕೆ.ಎಸ್., ವಿದ್ಯಾರ್ಥಿ ಸಂಯೋಜಕ ಸೆಬಾಸ್ಟಿಯನ್ ಮತ್ತಿತರರು ಉಪಸ್ಥಿತರಿದ್ದರು. ಛದ್ಮವೇಷ ಸಹಿತ ಆರು ವಿವಿಧ ಸ್ಪರ್ಧೆಗಳು ನಡೆದವು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸಮಾರೋಪ ಸಮಾರಂಭ:
ಸಂಜೆ ಸಮಾರೋಪ ಸಮಾರಂಭ ನಡೆಯಿತು. ಕಲೆ, ಸಾಹಿತ್ಯದಲ್ಲಿ ತೊಡಗಿಕೊಂಡಿರುವ ಕಾಲೇಜಿನ ಬೋಧಕೇತರ ಸಿಬ್ಬಂದಿ ಸುರೇಂದ್ರ ಜೈನ್ ಮತ್ತು ಧನರಾಜ್ ಮುಖ್ಯ ಅತಿಥಿಗಳಾಗಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಅಧ್ಯಕ್ಷೀಯ ನುಡಿಗಳನ್ನಾಡಿದರು. ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮ ಸಂಯೋಜಕ ಶರಶ್ಚಂದ್ರ ಕೆ. ಎಸ್. ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಸಂಯೋಜಕ ಸೆಬಾಸ್ಟಿಯನ್ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ತೇಜಸ್ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಹರ್ಷಿನಿ ವಂದಿಸಿ, ಸಂಜನಾ ಪಿ. ಮತ್ತು ದೀಕ್ಷಿತ ಓ. ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


