ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಸಾಹಿತ್ಯ ತಾರೆ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆ ಆಯ್ಕೆ ಆಗಿದೆ. ಈ ಪ್ರೌಢ ಶಾಲೆಯು ಮಕ್ಕಳ ಸ್ವರಚನೆಗಳಿರುವ ಶಾಲಾ ವಾರ್ಷಿಕ ಹಸ್ತ ಪತ್ರಿಕೆ ಶಾರದಾ ವಾಣಿಯನ್ನು ಹಲವಾರು ವರ್ಷಗಳಿಂದ ಬಿಡುಗಡೆಗೊಳಿಸುತ್ತಿದೆ, ಹಾಗೂ ಮಕ್ಕಳಲ್ಲಿ ಕಲೆ ಸಾಹಿತ್ಯ ಸಂವರ್ಧನೆಗೆ ಪೋಷಕವಾಗುವ ಹಲವಾರು ಚಟುವಟಿಕೆಗಳನ್ನು ಉತ್ತಮವಾಗಿ ಸಂಘಟಿಸಿಕೊಂಡು ಬರುತ್ತಿರುದನ್ನು ಮಕ್ಕಳ ಕಲಾ ಲೋಕವು ಗುರುತಿಸಿ ಮಕ್ಕಳ ಕಲಾ ಲೋಕದ ಪ್ರಶಸ್ತಿ ಆಯ್ಕೆ ಸಮಿತಿಯು ಶ್ರೀ ಶಾರದಾ ಪ್ರೌಢ ಶಾಲೆಯ ಆಯ್ಕೆಯನ್ನು ಅಂತಿಮಗೊಳಿಸಿದೆ.
ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಢಿಸೆಂಬರ್ 6ರಂದು ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆಯುವ17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

