ಪುತ್ತೂರು: ಮಂಗಳೂರಿನ ಪುರಭವನದಲ್ಲಿ ಕಥಾಬಿಂದು ಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರುರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೊಳುವಾರು ನಿವಾಸಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ್ಲಿ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಥಾಬಿಂದು ಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ರಾದ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ,ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್‌ಬೈಲ್, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕೂನ ತಾಕೋಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗದ ಶ್ರೀಧರ್, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ಶ್ರೀಮತಿ ರೇಖಾ ಸುದೇಶ್ ರಾವ್, ವೀಣಾಕಾರಂತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ