ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕ

Upayuktha
0

ಲೋಕಸಭೆ ಚುನಾವಣೆಗೆ ಮುನ್ನ ಪಕ್ಷ ಸಂಘಟಿಸಿ ಗೆಲುವಿನ ಗುರಿಯತ್ತ ಒಯ್ಯುವ ಹೊಣೆ ಬಿಎಸ್‌ವೈ ಪುತ್ರನ ಹೆಗಲಿಗೆ



ಹೊಸದಿಲ್ಲಿ: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರದ ಶಾಸಕ, ಯುವ ನಾಯಕ ಬಿ.ವೈ ವಿಜಯೇಂದ್ರ ಅವರನ್ನು ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ.


ಈ ನೇಮಕ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ರಾಷ್ಟ್ರೀಯ ಬಿಜೆಪಿಯ ಪ್ರಕಟಣೆ ತಿಳಿಸಿದೆ.


ಬಿ.ವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿಯ ಪರಮೋಚ್ಚ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರರಾಗಿದ್ದು, ತಳಮಟ್ಟದಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಇಂದು ರಾಜ್ಯಾಧ್ಯಕ್ಷರಾಗಿ ನೇಮಕಗೊಳ್ಳುವ ವರೆಗೆ ಬೆಳವಣಿಗೆ ದಾಖಲಿಸಿದ್ದಾರೆ.


ಆರು ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಕಹಿ ಉಂಡ ಬಳಿಕ ಬಿಜೆಪಿ ಚೇತರಿಸಿಕೊಳ್ಳಲು ಬಹಳ ದೀರ್ಘಕಾಲವನ್ನೇ ತೆಗೆದುಕೊಂಡಿದೆ. ಇದುವರೆಗೆ ರಾಜ್ಯಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಗಿದಿದ್ದರೂ ಹೊಸ ನೇಮಕಾತಿ ಆಗುವ ವರೆಗೂ ಅವರನ್ನೇ ಮುಂದುವರಿಸಲಾಗಿತ್ತು.


ಮುಂದಿನ ಲೋಕಸಭಾ ಚುನಾವಣೆಗೆ ಇನ್ನು ಬಹುತೇಕ 6 ತಿಂಗಳುಗಳಷ್ಟೇ ಉಳಿದಿದ್ದು, ಅಷ್ಟರಲ್ಲಿ ಪಕ್ಷವನ್ನು ಸಂಘಟಿಸಿ ಮತ್ತೆ ಗೆಲುವಿನತ್ತ ಕೊಂಡೊಯ್ಯುವ ಬಹುದೊಡ್ಡ ಜವಾಬ್ದಾರಿ ಇದೀಗ ಬಿ.ವೈ ವಿಜಯೇಂದ್ರ ಅವರ ಹೆಗಲೇರಿದೆ. ಅವರು ಈ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎನ್ನುವ ಭರವಸೆಯೂ ಪಕ್ಷದ ವರಿಷ್ಠರಲ್ಲಿದೆ.


ಇನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆಯ್ಕೆ ಆಗಬೇಕಿದ್ದು, ಅದನ್ನೂ ಸಹ ವರಿಷ್ಠರು ಬೇಗನೆ ಅಂತಿಮಗೊಳಿಸುವ ನಿರೀಕ್ಷೆಯಿದೆ.


ವಿಜಯೇಂದ್ರ ಕೃತಜ್ಞತೆ:

ರಾಜ್ಯಾಧ್ಯಕ್ಷರಾಗಿ ತಮ್ಮನ್ನು ನೇಮಿಸಿದ ವರಿಷ್ಠರ ಕ್ರಮಕ್ಕೆ ಕೃತಜ್ಞತೆ ಸಲ್ಲಿಸಿ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅದು ಇಂತಿದೆ:


ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ಶ್ರೀ @narendramodi

 ji ಅವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda  ji ಅವರಿಗೆ, ಗೃಹ ಸಚಿವ ಶ್ರೀ  @AmitShah ji ಅವರಿಗೆ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @blsanthosh ji ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು.


ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ.

ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ.








ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿ. ವೈ ವಿಜಯೇಂದ್ರ ನೇಮಕವನ್ನು ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ.

 

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top