ಕ್ರೀಡೆ: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Chandrashekhara Kulamarva
0


ಅಡ್ಯನಡ್ಕ: ನವೆಂಬರ್ 11ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಕು. ನಮಿತಾ ಪಿ ಕೆ, ದ್ವಿತೀಯ ವಿಜ್ಞಾನ ವಿಭಾಗ, ಹುಡುಗಿಯರ ವಿಭಾಗದ ಕೋಲುಜಿಗಿತದಲ್ಲಿ ಪ್ರಥಮ ಸ್ಥಾನ ಹಾಗೂ ಹಾಫಿಲ್, ಪ್ರಥಮ ವಿಜ್ಞಾನ ವಿಭಾಗ ಇವರು ಹುಡುಗರ ವಿಭಾಗದ ಕೋಲುಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಸನತ್, ಪ್ರಥಮ ಕಲಾವಿಭಾಗ ಇವರು ಹುಡುಗರ ವಿಭಾಗದ ಕೋಲುಜಿಗಿತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ನವ್ಯ, ದ್ವಿತೀಯ ವಾಣಿಜ್ಯ ವಿಭಾಗ ಇವರು ಹುಡುಗಿಯರ ವಿಭಾಗದ ಈಟಿ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ದೈಹಿಕ ಶಿಕ್ಷಣ ಉಪನ್ಯಾಸಕರಾದ ವಸಂತ ಗೌಡ ಕೆ. ಇವರು ಈ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದಾರೆ.


إرسال تعليق

0 تعليقات
إرسال تعليق (0)
To Top