ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿಗೆ ಚಿನ್ನ, ಬೆಳ್ಳಿ ಪದಕ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮಂಗಳೂರು ಗಣಪತಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.


ದ್ವಿತೀಯ ಪಿಯುಸಿ  ವಿಜ್ಞಾನ ವಿಭಾಗದ ವಿನೀತ ವಿ  ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ಲಾಂಗ್ ಜಂಪ್‍ನಲ್ಲಿ ಬೆಳ್ಳಿ ಪದಕ ಪಡೆದು ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಶಾನ್ ಪ್ರಕಾಶ್  400 ಮೀಟರ್ ಹರ್ಡಲ್ಸ್ ನಲ್ಲಿ ಬೆಳ್ಳಿ ಪದಕ ಪಡೆದು ಬೆಂಗಳೂರಿನಲ್ಲಿ  ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈತನು ಆರ್ಯಾಪು ಗ್ರಾಮದ ರವಿಪ್ರಕಾಶ್ ಕೆ.ಸಿ ಮತ್ತು ಚಂದ್ರಕಲಾ ಕೆ ವಿ ದಂಪತಿ ಪುತ್ರ.


ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top