ಉಜಿರೆ: ಮಂಗಳೂರು ಸಂಸ್ಕøತ ಸಂಘ ( ರಿ ), ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ, ಶ್ರೀ ಮದ್ಭಗವದ್ಗೀತಾ ಅಭಿಯಾನ ಸಮಿತಿ ದ.ಕ, ಸಂಸ್ಕೃತ ಸಂಘ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು, ಉಜಿರೆ - ಧರ್ಮಸ್ಥಳ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆ ಹಾಗೂ ಯಕ್ಷಭಾರತಿ ( ರಿ ) ಕನ್ಯಾಡಿ , ಬೆಳ್ತಂಗಡಿ ತಾಲೂಕು. ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ – 2023 ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನ.18 ಶನಿವಾರ ಮಧ್ಯಾಹ್ನ 2 ಘಂಟೆಗೆ ನಡೆಯಲಿದೆ.
ಉಜಿರೆಯ ಶ್ರೀ ಜನಾರ್ದನ ದೇವಸ್ಥಾನ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯ ಅವರು ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಯಂಕಾಲ 4 ಘಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ ) , ಉಜಿರೆ ಇದರ ಸಂಸ್ಕøತ ಭಾμÁ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಭಟ್ ಅಧ್ಯಕ್ಷತೆ ವಹಿಸಲಿದ್ದು ಯಕ್ಷಭಾರತಿ (ರಿ ) ಕನ್ಯಾಡಿ, ಬೆಳ್ತಂಗಡಿ ತಾಲೂಕು ಇದರ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಇವರು ಬಹುಮಾನ ವಿತರಣೆ ಮಾಡಲಿದ್ದಾರೆ.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಬೆಳ್ತಂಗಡಿ ತಾಲೂಕಿನ ಶ್ರೀ ಭಗವದ್ಗೀತಾ ಅಭಿಯಾನದ ಸಂಯೋಜಕ ಡಾ. ಪ್ರಸನ್ನಕುಮಾರ ಐತಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ