ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಅಗತ್ಯ: ರವಿ ಪ್ರಸಾದ್

Upayuktha
0



ಸುರತ್ಕಲ್ : ಆಡಳಿತಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು  ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅರಿವು ಹಾಗೂ ಆಸಕ್ತಿ ಮೂಡಿಸಿಕೊಳ್ಳಬೇಕಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ವಿಚಾರಗಳನ್ನು ಪದವಿ ಶೈಕ್ಷಣಿಕ ಚೌಕಟ್ಟಿನೊಳಗಡೆ ತಂದಿರುವುದು ಸ್ವಾಗತಾರ್ಹ ಎಂದು ಕರ್ನಾಟಕ ಬ್ಯಾಂಕ್‍ನ ಕೇಂದ್ರ ಕಛೇರಿಯ ಸೀನಿಯರ್ ಮ್ಯಾನೇಜರ್ ರವಿ ಪ್ರಸಾದ್ ನುಡಿದರು. 



ಅವರು ಗೋವಿಂದ ದಾಸ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಆಯೋಜಿಸಿಲಾಗಿದ್ದ ಔದ್ಯೋಗಿಕ ಅವಕಾಶ ಕೌಶಲ್ಯಗಳು ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.



ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷಾ ವಿಷಯಗಳ ಕುರಿತಂತೆ ನಿರಂತರ ತರಬೇತಿ ನಡೆಸಬೇಕೆಂದರು.ಭೂಮಿಕ ಸ್ವಾಗತಿಸಿ ಸವಿತಾ ವಂದಿಸಿದರು. ಪ್ರಕ್ಷಿತಾ ನಿರೂಪಿಸಿದರು.



ವಾಣಿಜ್ಯ ವಿಭಾಗದದ ಮುಖ್ಯಸ್ಥೆ ಡಾ. ಸೌಮ್ಯ ಪ್ರವೀಣ್, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ಶ್ರೀದೇವಿ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ಸಂಘದ ಸಂಯೋಜಕರಾದ ಡಾ. ಭಾಗ್ಯಲಕ್ಷ್ಮಿ ಎಂ., ಶಿಲ್ಪಾರಾಣಿ ಕೆ., ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ಗಣೇಶ ಆಚಾರ್ಯ, ಪ್ರಾಧ್ಯಾಪಕರಾದ ಪುನಿತಾ ಆರ್., ಪ್ರಕೃತಿ ಮತ್ತಿತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top