ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ ಇರಬೇಕು: ಪ್ರೊ. ವಿಷ್ಣು ಗಣಪತಿ ಭಟ್

Upayuktha
0

ಪುತ್ತೂರು: ಕೌಶಲ್ಯವನ್ನು ವೃದ್ಧಿಗೊಳಿಸಲು ಯಾವುದೇ ಒಳದಾರಿಗಳು ಇಲ್ಲ. ಸ್ವಪ್ರೇರಿತರಾಗಿ ತಯಾರಿ ನಡೆಸಿ ಸಮಯ ವ್ಯರ್ಥಮಾಡದೇ ಸಿಕ್ಕಂತಹ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಕೌಶಲ್ಯ ಅಭಿವೃದ್ಧಿಯು ಕೇವಲ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲ, ಜೀವನದುದ್ದಕ್ಕೂ ಅಗತ್ಯ ಎಂದು ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.  ವಿಷ್ಣು ಗಣಪತಿ ಭಟ್  ಅಭಿಪ್ರಾಯಪಟ್ಟರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ)ದ ಸ್ನಾತ್ತಕೋತ್ತರ ವಾಣಿಜ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ನಡೆಯಲಿರುವ ಒಂದು ವಾರದ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 



ವಿದ್ಯಾರ್ಥಿಗಳಲ್ಲಿ ನಿರ್ದಿಷ್ಟ ಗುರಿ ಇರಬೇಕು, ಅದನ್ನು ಸಾಧಿಸುವಲ್ಲಿ ಶ್ರಮವಹಿಸಬೇಕು. ಈ ನಿಟ್ಟಿನಲ್ಲಿ ಪ್ರತಿ ನಿಮಿಷವೂ ಅತ್ಯಂತ ಮಹತ್ವಪೂರ್ಣವಾಗಿರುತ್ತದೆ. ಈ ರೀತಿಯಾಗಿ ಕಾರ್ಯನಿರ್ವಹಿಸಿದರೆ ಯಶಸ್ಸು ನಮ್ಮದಾಗುತ್ತದೆ ಎಂದರು. 



ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೆನರಾ ಎಕ್ಸೆಲೆನ್ಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ನಯನಾ ಮಾತನಾಡಿ, ನೆಟ್, ಕೆ-ಸೆಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕೇವಲ ಸರ್ಕಾರಿ ವಲಯಕ್ಕೆ ಮಾತ್ರ ಸೀಮಿತವಲ್ಲ, ಖಾಸಗಿ ವಲಯಕ್ಕೂ ಅವಶ್ಯಕವಾಗಿದೆ. ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಲಭಿಸಲು ಕಠಿಣ ಪರಿಶ್ರಮ ಅತ್ಯಗತ್ಯ. ಆದ್ದರಿಂದ, ಇಂದಿನಿಂದಲೇ ನಿಮ್ಮ ತಯಾರಿಯನ್ನು ಆರಂಭಿಸಿ ಎಂದು   ಹೇಳಿದರು.


ವೇದಿಕೆಯಲ್ಲಿ ಸ್ನಾತಕೋತ್ತರ ವಿಭಾಗದ ಡೀನ್ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ವಿಜಯ ಸರಸ್ವತಿ ಬಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶ್ರೀಜ ಹೆಚ್ ಎಸ್ ಸ್ವಾಗತಿಸಿ, ವಿದ್ಯಾರ್ಥಿ ರಾಕೇಶ್ ಪ್ರಸಾದ್ ಕೆ ವಂದಿಸಿದರು.  ವಿದ್ಯಾರ್ಥಿನಿ ಶರಣ್ಯ ಪ್ರಾರ್ಥಿಸಿ, ಮೈತ್ರಿ ಹೆಚ್.ವಿ  ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top