ಉಜಿರೆ: ಉನ್ನತ ಸ್ಥಾನದಲ್ಲಿರುವ ಪ್ರತಿಷ್ಠಿತರು ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಬಗ್ಗೆ ಕಾಳಜಿ ಹೊಂದಿದಾಗ ಮಾತ್ರ ಅವರ ವ್ಯಕ್ತಿಗತ ಯಶಸ್ಸು ಅರ್ಥಪೂರ್ಣವಾಗುತ್ತದೆ ಎಂದು ಖ್ಯಾತ ದಂತ ವೈದ್ಯರೂ, ಎಸ್.ಡಿ.ಎಂ ಕಾಲೇಜಿನ ಹಳೆ ವಿದ್ಯಾರ್ಥಿ ಡಾ.ಎಂ.ಎಂ.ದಯಾಕರ ಅಭಿಪ್ರಾಯಪಟ್ಟರು.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ನಡೆದ 'ನೆನಪಿನಂಗಳ ಕಾರ್ಯಕ್ರಮಗಳ ಸರಣಿಯ ಎಂಟನೇ ಆವೃತ್ತಿಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು. ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಗುರುತಿಸಿಕೊಳ್ಳಲು ವಿವಿಧ ಹಂತಗಳ ಶೈಕ್ಷಣಿಕ ಕಲಿಕೆ ಪೂರಕವಾಗುತ್ತದೆ. ಇಂಥ ಕಲಿಕೆಯೊಂದಿಗೆ ಮುನ್ನಡೆದು ಉನ್ನತ ಸ್ಥಾನ ಗಳಿಸಿದಾಗ ಆ ಒಳ್ಳೆಯತನದ ಮಾದರಿ ವಿಸ್ತಾರಗೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗಳ ಬಗೆಗೂ ಯೋಚಿಸಬೇಕು. ಅಂಥ ಕಾಳಜಿಯೊಂದಿಗೆ ಪ್ರತಿಸ್ಪಂದಿಸುವ ಹೊಣೆಗಾರಿಕೆ ನಿರ್ವಹಿಸಬೇಕು ಎಂದರು.
ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಹಿತರಕ್ಷಣೆಯ ಪರವಾಗಿ ಆಲೋಚಿಸುವ ವಿಶಾಲ ದೃಷ್ಟಿಕೋನಗಳನ್ನು ಕಂಡುಕೊಳ್ಳಲು ಪೂರಕವಾದ ಶೈಕ್ಷಣಿಕ ವಾತಾವರಣವಿದೆ. ಇಲ್ಲಿ ಕಲಿತ ಪ್ರತಿಯೊಬ್ಬ ವಿದ್ಯಾರ್ಥಿಗಳು ಎಸ್.ಡಿ.ಎಂ ಕುಟುಂಬಕ್ಕೆ ಸೇರಿರುವವರು. ವಿದ್ಯೆಯ ಜೊತೆಗೆ ಸಂಸ್ಕಾರದ ಕಲಿಕೆಯೂ ಎಸ್.ಡಿ.ಎಂ ಶಿಕ್ಷಣದ ಅಂತಃಸತ್ವ. ಇಂಥ ಶಿಕ್ಷಣವನ್ನು ಒದಗಿಸಿಕೊಡುವುದರ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಭವ್ಯವಾಗಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡುತ್ತಿದೆ ಎಂದರು.
ಬದಲಾವಣೆಯು ಜಗದ ನಿಯಮ. ಈ ಬದಲಾವಣೆಗೆ ಒಗ್ಗಿಕೊಂಡರೆ ಜೀವನದಲ್ಲಿ ಯಶಸ್ಸು ಸುಲಭವಾಗುತ್ತದೆ. ಆದರೆ ಬದಲಾವಣೆಗೆ ಬೇಕಾದ ಸಂಪನ್ಮೂಲಗಳಾದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ನಾಯಕರಾಗಿ ಹೊರಹೊಮ್ಮಬಹುದು ಎಂದು ನುಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿದರು. ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಜನುಮದಿನಕ್ಕೆ ಹಾರೈಸಿದರು. ಡಾ. ಎಂ.ಎಂ ದಯಾಕರ ಕೇವಲ ವೈದ್ಯರಾಗಿ ಮಾತ್ರವಲ್ಲದೆ ಸಾಹಿತ್ಯ, ಸಂಸ್ಕøತಿ, ಕಲೆ, ಮಕ್ಕಳ ವಿದ್ಯಾಭ್ಯಾಸಕ್ಕೂ ಸಹಾಯ ಮಾಡುತ್ತಿದ್ದಾರೆ. ಸಮಾಜಕ್ಕೆ ಇವರು ನೀಡುತ್ತಿರುವ ಕೊಡುಗೆ ಅಪಾರ ಎಂದು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಅಂತಿಮ ಬಿ.ಕಾಂ ವಿದ್ಯಾರ್ಥಿ ಗೌಡ ಸುಜಿತ್ ಸೂರ್ಯ ಹಳೆ ವಿದ್ಯಾರ್ಥಿ ಸಂಘದಿಂದ ನೀಡುವ ವಿದ್ಯಾರ್ಥಿ ವೇತನಕ್ಕೆ ಭಾಜನರಾದರು, ಡಾ. ಎಂ.ಎಂ ದಯಾಕ ಅವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಪ್ರಾಧ್ಯಾಪಕ, ಜಿಲ್ಲಾ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರೂ ಆದ ಡಾ.ಎಂ.ಪಿ ಶ್ರೀನಾಥ್ ಸ್ವಾಗತಿಸಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಮಹೇಶ್ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ