ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ

Upayuktha
0

ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಆಚರಣೆ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಗೂ ಧ್ವಜಾರೋಹಣವನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಹಾಗೂ ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಪ್ರತಿಷ್ಠಾನದ ಲಯನ್ ಸುಂದರ್ ಶೆಟ್ಟಿ ಬೆಟ್ಟಂಪಾಡಿ ನೆರವೇರಿಸಿ, ರಾಜ್ಯ ಹೇಗೆ ಬೆಳೆದು ಬಂತು,  ನಮ್ಮ ಸಂಪದ್ಭರಿತ ನಾಡಿನ ಬೆಳವಣಿಗೆಯಲ್ಲಿ ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ದುಡಿದ ಮಹನೀಯರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.


ವಿದ್ಯೆಯೊಂದಿಗೆ ವಿನಯತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ನಾಗರಿಕರಾಗಬೇಕೆಂದು ಹೇಳುತ್ತಾ ಶುಭಾಶಯವನ್ನು ನೀಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುರತ್ಕಲ್‌ನ ಪ್ರತಿಷ್ಠಿತ ಎನ್.ಐ.ಟಿ.ಕೆಯ ಡೀನ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯಾದ ಡಾ. ಚಿತ್ತರಂಜನ್ ಹೆಗ್ಡೆ ಇವರು ಕರ್ನಾಟಕ ಹಾಗೂ ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಮಾಧ್ಯಮವನ್ನು ಕಡೆಗಣಿಸದೆ ಕನ್ನಡದ ಸಂಸ್ಕೃತಿ ನಾಡು ನುಡಿಯನ್ನು ಬೆಳೆಸಲು ಕಟಿಬದ್ಧರಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ಕುಳಾಯಿ ಇವರು ಇತರ ಎಲ್ಲಾ ಭಾಷೆಗಳನ್ನು ಪ್ರೀತಿಸಿ ಕನ್ನಡವನ್ನು ಉಳಿಸಿ ಬೆಳೆಸಬೇಕೆಂದು ಹಾಗೂ ಕನ್ನಡದ ಹೃದಯ ಶ್ರೀಮಂತಿಕೆಯನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಮಕ್ಕಳಿಗೆ ತಿಳಿಸಿದರು. 


ವೇದಿಕೆಯಲ್ಲಿ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ, ಹಾಗೂ ಶಾಲಾ ಸಂಚಾಲಕರಾದ ಸುಧಾಕರ ರಾವ್ ಪೇಜಾವರ್, ಪ್ರಸ್ತಾವನ ನುಡಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಜಯ, ಅಧ್ಯಕ್ಷ ದೇವದಾಸ್, ಮಾಜಿ ಅಧ್ಯಕ್ಷ ಗಂಗಾಧರ ಪೂಜಾರಿ, ಉಪಸ್ಥಿತರಿದ್ದರು. ವೇದಿಕೆಯಲ್ಲಿ ಪ್ರಖ್ಯಾತ ಕನ್ನಡ ಕವಿಗಳಿಂದ ರಚಿತವಾದ ಐದು ಕನ್ನಡ ರಾಜ್ಯೋತ್ಸವ ಗೀತೆಗಳನ್ನು ಶಾಲಾ ವಿದ್ಯಾರ್ಥಿನಿಯರು ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಬಾಲಚಂದ್ರ ಕೆ,   ಎಲ್ಲರನ್ನೂ ಸ್ವಾಗತಿಸಿ ದಿನದ ಮಹತ್ವದ ಬಗ್ಗೆ ತಿಳಿಸಿದರು. ವಿದ್ಯಾರ್ಥಿಗಳು ಕಾರ‍್ಯಕ್ರಮ ನಿರೂಪಿಸಿ ವಂದಿಸಿದರು. ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು, ಮಕ್ಕಳ ಪೋಷಕರು, ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top