ಸುರತ್ಕಲ್: ಮೈಸೂರು ರಾಜ್ಯವಾಗಿದ್ದ ನಮ್ಮ ರಾಜ್ಯವು ಕರ್ನಾಟಕ ರಾಜ್ಯವಾಗಿರೂಪುಗೊಂಡು ಐದು ದಶಕಗಳಾಗುತ್ತಿದೆ. ಕನ್ನಡ ನಾಡಿನ ಭಾಷೆ, ಕಲೆ, ಸಂಸೃತಿಯು ಶ್ರೀಮಂತಿಕೆ ಮತ್ತು ವೈವಿಧ್ಯತೆಯಿಂದ ಕೂಡಿದ್ದು ವಿದ್ಯಾರ್ಥಿಗಳು ಇವುಗಳ ಬಗ್ಗೆ ಹೆಚ್ಚು ಅಧ್ಯಯನ ನಡೆಸಬೇಕು ಎಂದು ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿ ನುಡಿದರು. ಅವರು ಕನ್ನಡ ರಾಜ್ಯೋತ್ಸವ ದಿನಾರಣೆಯ ಅಂಗವಾಗಿ ತಾಯಿ ಭುವನೇಶ್ವರಿ ಛಾಯಾಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಕನ್ನಡದ ಹೆಸರಾಂತ ಕವಿಗಳ ಸಾಹಿತ್ಯಕ್ಕೆ ಧ್ವನಿಯಾಗುವ ಮೂಲಕ ನಾಡಿಗೆ ಗಾನ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಚಾರ್ಯ ಪ್ರೊ.ರಮೇಶ್ ಭಟ್ ಎಸ್.ಜಿ., ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರೊ. ಹರೀಶ ಆಚಾರ್ಯ ಪಿ, ಪ್ರೊ. ನೀಲಪ್ಪ ವಿ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವೈಭವಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸುವ ಕಾಲೇಜಿನ ಸಾಂಸ್ಕೃತಿಕ ತಂಡದ ಕಲಾವಿದರನ್ನು ಅಭಿನಂದಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


