ಮಂಗಳೂರು: ಉಳ್ಳಾಲ ಉಳಿಯ ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ವತಿಯಿಂದ ನಿನ್ನೆ (ಬುಧವಾರ) ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಜೀರ್ಣೋದ್ಧಾರ ಪುನರ್ -ನಿರ್ಮಾಣದ ನಿವೇದನಾ ಪತ್ರಿಕೆಯನ್ನು ನೀಡಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕದ್ರಿ ನವನೀತ ಶೆಟ್ಟಿ, ನಮ್ಮ ಕುಡ್ಲ ವಾರ್ತಾ ವಾಹಿನಿಯ ಆಡಳಿತ ನಿರ್ದೇಶಕರಾದ ಲೀಲಾಕ್ಷ ಬಿ ಕರ್ಕೆರ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ರಾಜೇಶ್ ಉಳಿಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಟಿ ರಮೇಶ್ ಮೆಂಡನ್, ಉಪಾಧ್ಯಕ್ಷರಾದ ರಾಮದಾಸ್ ಸೋಮೇಶ್ವರ, ಪ್ರಧಾನ ಕಾರ್ಯದರ್ಶಿ ಸುಂದರ ಉಳಿಯ, ನಮ್ಮ ಕುಡ್ಲದ ಜಯಂತ್ ಉಳ್ಳಾಲ್, ಪ್ರಕಾಶ್ ಉಳಿಯತ್ತಾಯ ಇವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ