ಪುತ್ತೂರು: ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ರಾಮಾಯಣ – ಋಷಿದರ್ಶನ ಕಾರ್ಯಕ್ರಮ ನವೆಂಬರ್ 4ರಂದು ಅಪರಾಹ್ನ 1.30ರಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಶಾಲಾ ಆಡಳಿತ ಮಂಡಳಿ ಸಮಿತಿಯ ಅಧ್ಯಕ್ಷ ರಮೇಶ್ಚಂದ್ರ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ಅಖಿಲ ಭಾರತೀಯ ಸಾಹಿತ್ಯ ಪರಿಷತ್‍ನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಪ್ರವಚನ ನೀಡಲಿದ್ದಾರೆ. ಪುತ್ತೂರಿನ ದ್ವಾರಕಾ ಕನ್‍ಸ್ಟ್ರ್ರಕ್ಷನ್ಸ್‍ನ ಪ್ರವರ್ತಕ ಗೋಪಾಲಕೃಷ್ಣ ಭಟ್ಟ ಅತ್ರ್ಯಡ್ಕ ಅಭ್ಯಾಗತರಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


