ಮುಡಿಪು: ಎಲ್ಲರನ್ನು ಸಮಭಾವದಿಂದ ನೋಡುವ ಗೌರವಿಸುವ ಮನೋಭಾವ ಕನ್ನಡಿಗರದ್ದು. ಪರಧರ್ಮ, ಪರ ವಿಚಾರಗಳನ್ನೂ ಗೌರವಿಸುತ್ತಾ ಬಂದ ಸಹಿಷ್ಣು ಪರಂಪರೆ ಕನ್ನಡ ನಾಡಿನದ್ದು ಎಂದು ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಲತಾ ಅಭಯ್ ಹೇಳಿದರು.
ಅವರು ಬುಧವಾರ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ಘಟಕ ಮತ್ತು ವಿಶ್ವಮಂಗಳ ವಿದ್ಯಾಸಂಸ್ಥೆ ಮಂಗಳಗಂಗೋತ್ರಿ ಆಶ್ರಯದಲ್ಲಿ ವಿಶ್ವಮಂಗಳದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ವಿಶೇಷೋಪನ್ಯಾಸ ಕಾರ್ಯಕ್ರಮ ದಲ್ಲಿ ಉಪನ್ಯಾಸ ನೀಡಿದರು
ಕನ್ನಡ ಭಾಷೆ ಸಾಹಿತ್ಯದ ಕುರಿತಾದ ತಿಳುವಳಿಕೆಯನ್ನು ಹೆಚ್ಚಿಸುವ ಕಾರ್ಯಕ್ರಮಗಳು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ ವಹಿಸಿದ್ದರು. ಸಮಾರಂಭದಲ್ಲಿ ಉಳ್ಳಾಲ ಕಸಾಪ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಉಳ್ಳಾಲ ಹೋಬಳಿ ಅಧ್ಯಕ್ಷೆ ವಿಜಯಲಕ್ಷ್ಮೀ ಪ್ರಸಾದ್ ರೈ, ವಿಶ್ವಮಂಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರವೀಣ್, ವಿಶ್ವಮಂಗಳ ವಿದ್ಯಾಸಂಸ್ಥೆಯ ಕಾಲೇಜು ಪ್ರಾಂಶುಪಾಲೆ ಪೂರ್ಣಿಮಾ ಡಿ ಮತ್ತು ವಿಶ್ವಮಂಗಳ ವಿವಿಧ ಶಾಲೆಗಳ ಮುಖ್ಯಸ್ಥರುಗಳಾದ ಪ್ರಿಯಾ, ಶೋಭಾವತಿ, ಹಂಸಗೀತ, ವೆರೋನಿಕಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಡಾ.ಲತಾ ಅಭಯ್ ಇವರಿಗೆ ರಾಜ್ಯೋತ್ಸವ ಸಮಾರಂಭದ ಗೌರವ ಸನ್ಮಾನವನ್ನು ಮಾಡಲಾಯಿತು.
ವಿಶ್ವಮಂಗಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರಿಯಾ ಸ್ವಾಗತಿಸಿದರು. ಸಹಶಿಕ್ಷಕಿ ಆಶಾಲತ ವಂದಿಸಿದರು. ವಿದ್ಯಾರ್ಥಿನಿ ತ್ವಿಶಾ ನಿರೂಪಿಸಿದರು. ಶ್ರಿಯಾ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಸಮಾರಂಭದ ಬಳಿಕ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


