ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸರಕಾರೀ ಪದವಿಪೂರ್ವ ಕಾಲೇಜು, ನಡ ಇಲ್ಲಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ "ರಾಷ್ಟ್ರಪತಿ ಪದಕ" ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ ಸಲ್ಲಿಸಲಾಯಿತು.
ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಇವರು ಸೈನ್ಯಕ್ಕೆ ಸೇರುವ ಪ್ರಾಂಜಲ್ ನ ದೃಢ ನಿರ್ಧಾರವನ್ನು, ಶ್ರೀಮಂತಿಕೆಗೆ ಮನಸೋಲದ ದಿವ್ಯ ವ್ಯಕ್ತಿತ್ವವನ್ನು ವಿವರಿಸುತ್ತಾ, ಎಲ್ಲಾ ಯುವಕ ಯುವತಿಯರಿಗೆ ಅವರು ಆದರ್ಶವಾಗಬೇಕೆಂದು ಕರೆ ನೀಡಿದರು. ತದನಂತರ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ಎಲ್ಲರೂ ಪ್ರಾಂಜಲ್ ನ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಎಲ್ಲಾ ರೇಂಜರ್ಸ್ ವಿದ್ಯಾರ್ಥಿನಿಯರು ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ