ಉಡುಪಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಹಾಗೂ ತಾಲೂಕು ಪಂಚಾಯತ್ ಉಡುಪಿ ಇವರ ಸಹಯೋಗದೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಸೋಮವಾರ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ದಿನಕರ್ ಬಾಬು ಕಾರ್ಯಕ್ರಮ ಉದ್ಘಾಟಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಾಗೂ ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಫಲಾನುಭವಿಗಳು ಕೌಶಲ್ಯ ಅಭಿವೃದ್ಧಿ ತರಬೇತಿ ಪಡೆಯುವುದು ಅತಿ ಅವಶ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ ಬಾಳೇರಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಹಾಗೂ ಕೌಶಲ್ಯಾಭಿವೃದ್ಧಿ ಆಕಾಂಕ್ಷಿಗಳಿಗೆ ಎಲ್ಲಾ ಕ್ಷೇತ್ರದಲ್ಲಿಯೂ ತರಬೇತಿಯನ್ನು ಇಲಾಖೆಯ ವತಿಯಿಂದ ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯ, ಸಿಡಾಕ್‍ನ ತರಬೇತುದಾರರಾದ ಪೃಥ್ವಿರಾಜ್ ನಾಯಕ್ ಮತ್ತು ಶುೃತಿ ಉಪಸ್ಥಿತರಿದ್ದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್ ಮಂಗಳೂರಿನ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ ಹಾಗೂ ಎನ್‍ಯುಎಲ್‍ಎಮ್ ಉಡುಪಿಯ ವ್ಯವಸ್ಥಾಪಕ ರಾಮಕೃಷ್ಣ ಮಾಹಿತಿ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ