ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ‘ದೀಪಾವಳಿ ಸಂಭ್ರಮ’

Upayuktha
0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ನ. 11ರಂದು ‘ದೀಪಾವಳಿ ಸಂಭ್ರಮ’ ಆಯೋಜಿಸಲಾಗಿತ್ತು.


ಅರ್ಚಕ ಸುದರ್ಶನ ತಂತ್ರಿ ಎಡಪದವು ಅವರು ಗೋಪೂಜೆ, ವಾಹನ ಪೂಜೆ, ಆಯುಧ ಪೂಜೆ, ಶಾರದಾ ಪೂಜೆ ಮತ್ತು ಲಕ್ಷ್ಮೀ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು. ಕೇಂದ್ರದ ಸ್ವಚ್ಛತಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಗೆ ವಸ್ತ್ರದಾನ ಮಾಡಲಾಯಿತು.

 

ಕಾರ್ಯಕ್ರಮದ ಮುಖ್ಯ ಅತಿಥಿ, ಸೋನಿಯಾ ಯಶೋವರ್ಮ ಅವರು ಮಾತನಾಡಿ, “ನಮ್ಮ ಆಚರಣೆ, ಸಂಸ್ಕೃತಿಗಳಲ್ಲಿ ಹಬ್ಬಗಳು ವಿಶೇಷ ಸ್ಥಾನ ವಹಿಸುತ್ತವೆ. ಈ ನಿಟ್ಟಿನಲ್ಲಿ ದೀಪಾವಳಿ ಆಚರಣೆಗಳಲ್ಲಿ ಕೂಡ ಪ್ರಮುಖವಾಗಿದೆ. ಹಬ್ಬಗಳು ಮನುಷ್ಯ ಮತ್ತು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ” ಎಂದರು.


ಇನ್ನೋರ್ವ ಮುಖ್ಯ ಅತಿಥಿ, ಜಾನಪದ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಜಿರೆ ಎಸ್ ಡಿ ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ರವೀಶ್ ಪಡುಮಲೆ ಅವರನ್ನು ಸಮ್ಮಾನಿಸಲಾಯಿತು.


ಅವರು ಮಾತನಾಡಿ, ಹಬ್ಬಗಳ ಮಹತ್ವ, ಉದ್ದೇಶ, ಮತ್ತು ಆಚರಿಸುವ ರೀತಿ ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದದವರು ದೀಪಗಳನ್ನು ಬೆಳಗಿದರು. ಆ ಸಂದರ್ಭದಲ್ಲಿ ತುಳುನಾಡಿನಲ್ಲಿ ಬಲೀಂದ್ರ ಪೂಜೆ ವೇಳೆ ಬಲೀಂದ್ರನನ್ನು ಕರೆಯುವ ವಿಧಾನವನ್ನು ಡಾ. ರವೀಶ್ ತಿಳಿಸಿಕೊಟ್ಟರು.


ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ. ಶುಭ ಹಾರೈಸಿದರು.


ಎಸ್ ಡಿ ಎಂ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಹಬ್ಬಗಳ ಮಹತ್ವ, ಸಾರವನ್ನು ಅರಿತು ಅದನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


 

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕ್ಲಾಸಿಕ್ ಟೈಗರ್ಸ್ ಧರ್ಮಸ್ಥಳ ತಂಡದಿಂದ ‘ಪಿಲಿ ನಲಿಕೆ’ ಪ್ರದರ್ಶನಗೊಂಡಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


 

ಶ್ರೀವಿದ್ಯಾ ಮತ್ತು ತಂಡದವರು ಪ್ರಾರ್ಥಿಸಿದರು. ಎಸ್.ಡಿ.ಎಂ. ಬಿ.ವೋಕ್ ಕೋರ್ಸ್ ಸಂಯೋಜಕ ಸುವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top