ಉಜಿರೆ: ಕಾಲ ಬದಲಾದಂತೆ ಔದ್ಯೋಗಿಕ ಕ್ಷೇತ್ರ ಕೂಡ ಕೃತಕ ಬುದ್ದಿಮತ್ತೆ, ರೋಬೋಟಿಕ್ಸ್ ನಂತಹ ಹೊಸ ವಿಚಾರಗಳಿಗೆ ತೆರೆದುಕೊಳ್ಳುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ನಿಂತ ನೀರಾಗದೇ ಇಂದಿನಿಂದಲೇ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳುವತ್ತ ಗಮನ ಹರಿಸಬೇಕು. ಈ ಮೂಲಕ ಸ್ಫರ್ಧಾತ್ಮಕ ಯುಗದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ವಿದ್ಯಾರ್ಥಿಗಳು ಕ್ರಿಯಾಶೀಲ ವ್ಯಕ್ತಿತ್ವ ರೂಢಿಸಿಕೊಳ್ಳಬೇಕು ಉಜಿರೆಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕ ಎಂ. ಜನಾರ್ದನ್ ನುಡಿದರು.
ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಾಣಿಜ್ಯ ವಿಭಾಗವು ಆಯೋಜಿಸಿದ್ದ ಒಂದು ದಿನದ ಅಂತರ್ ವಿಭಾಗೀಯ ಫೆಸ್ಟ್ - ಉತ್ಕೃಷ್ಟ 2ಕೆ23 ಉದ್ಘಾಟಿಸಿ ಅವರು ಮಾತನಾಡಿದರು.
ಒಂದು ಬಾರಿ ಶಿಕ್ಷಣ ಪೂರೈಸಿ, ವೃತ್ತಿಜೀವನದಲ್ಲಿ ತೊಡಗುವವರಿಗೆ ಅನೇಕ ಸಂದರ್ಭಗಳಲ್ಲಿ ಜಗತ್ತು ಸ್ನೇಹ, ಪ್ರೀತಿ ಮತ್ತು ವಿಶ್ವಾಸವನ್ನೇ ನೀಡುವುದಿಲ್ಲ. ವೃತ್ತಿಜೀವನವು ಅನೇಕ ಸವಾಲುಗಳನ್ನು ಪರಿಚಯಿಸುತ್ತಾ ಹೋಗುತ್ತದೆ. ಹಾಗಾಗಿ ಇಂತಹ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲೇ 'ಸ್ಮೈಲ್' ಎಂಬ ಸೂತ್ರವನ್ನು ಅಳವಡಿಸಿಕೊಳ್ಳಬೇಕು ಎಂದರು. ಸ್ವಯಂ ಕಾಳಜಿ, ಸಕರಾತ್ಮಕ ಮನಸ್ಥಿತಿ, ಸಂಯಮ, ವೈಶಿಷ್ಟ್ಯತೆ, ಭಾವನಾತ್ಮಕ ಸಮತೋಲನವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳನ್ನು ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು, ಪ್ರದರ್ಶಿಸಲು ಮತ್ತು ಹೊಸತನವನ್ನುಅರಿಯಲು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪಿ ಜಿ ವಿಭಾಗದ ಡೀನ್ ಡಾ. ವಿಶ್ವನಾಥ್ ಪಿ., ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ.ಪ್ರಿಯಾಕುಮಾರಿ, ಮಾಸ್ಟರ್ಸ್ ಪ್ಯಾಶನ್ ಸಂಯೋಜಕಿ ಮಮತಾ ಕೆ, ವಿದ್ಯಾರ್ಥಿ ಸಂಯೋಜಕಿ ನಯನ ಶ್ರೀ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದಿವ್ಯಲಕ್ಷ್ಮೀ ಸ್ವಾಗತಿಸಿದರು, ಕ್ಷಮಾ ವಂದಿಸಿದರು. ಅರಾಫತ್‍ಉನ್ನೀಸಾ ಮತ್ತು ಶಿವಪ್ರಸಾದ್ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ