ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ಆಯೋಜನೆ
ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನ.25ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಲಿದೆ.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದು, ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಗೌರವ ಉಸ್ಥಿತರಿರುತ್ತಾರೆ.
ಉದಯವಾಣಿಯ ಕುಂದಾಪುರ ವಿಭಾಗದ ಉಪ ಮುಖ್ಯ ವರದಿಗಾರ ಲಕ್ಷ್ಮೀ ಮಚ್ಚಿನ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಳಗ್ಗೆ 8:45ಕ್ಕೆ 'ಸ್ವಚ್ಛ ಉಜಿರೆ- ಸ್ವಸ್ಥ ಉಜಿರೆ' ಸ್ವಚ್ಛತಾ ಅಭಿಯಾನ ಹಾಗೂ ಬೀದಿ ನಾಟಕ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ