ಉಜಿರೆ: ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗವದ್ಗೀತಾ ಅಭಿಯಾನ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಡಿ.02 ರ ಶನಿವಾರ ಬೆಳಗ್ಗೆ 9 ಘಂಟೆಗೆ ಆರಂಭಗೊಳ್ಳಲಿದೆ.
ತಾಲೂಕು ಮಟ್ಟದಲ್ಲಿ ಈಗಾಗಲೇ ಕಂಠಪಾಠ , ಭಾಷಣ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಾದ ಪ್ರಾಥಮಿಕ , ಪ್ರೌಢ ಹಾಗೂ ಪಿಯುಸಿ ವಿದ್ಯಾರ್ಥಿ ಸ್ಪರ್ಧಾರ್ಥಿಗಳು ಅಂದು ಸ್ಪರ್ಧಿಸಲಿದ್ದು , ಅಂದು 11 ಘಂಟೆಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಸುರತ್ಕಲ್ಲಿನ ಉದ್ಯಮಿ ಉಮೇಶ್ ಹೆಗಡೆ ವಹಿಸಲಿದ್ದು , ಮುಖ್ಯ ವಕ್ತಾರರಾಗಿ ನಾವರದ ವೈದ್ಯರಾದ ಡಾ. ಪ್ರದೀಪ ನಾವರ ಭಾಗವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ತಿನ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಭೋಜೆಗೌಡ ಅವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುರೇಶ್, ಅಭಿಯಾನದ ಜಿಲ್ಲಾ ಸಂಯೋಜಕ ಡಾ. ಮಧುಕೇಶ್ವರ ಶಾಸ್ತ್ರೀ ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಶ್ರೀ ಮದ್ಭಗವದ್ಗೀತಾ ಸ್ಪರ್ಧಾ ಕಾರ್ಯಕ್ರಮದ ಸಂಚಾಲಕ ಡಾ. ಶ್ರೀಧರ ಭಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ