ಮಂಗಳೂರು : ನಮ್ಮ ದೈನಂದಿನ ಜೀವನದಲ್ಲಿ ಹೆಚ್ಚು ಹೆಚ್ಚು ಕನ್ನಡ ಬಳಸಿದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಕನ್ನಡ ಭಾಷೆ ಬಳಸಿ ಬೆಳೆಸಿದಲ್ಲಿ ಕನ್ನಡ ಭಾಷೆ ತನ್ನಿಂತಾನೇ ಉಳಿಯುತ್ತದೆ. ಕನ್ನಡದ ಬಗ್ಗೆ ಕೀಳರಿಮೆ ತೊಡೆದು ಹಾಕಿ ಭಾಷಾಭಿಮಾನ ಬೆಳೆಸಿಕೊಳ್ಳೋಣ. ಮನೆಗಳಲ್ಲಿ ಮಕ್ಕಳ ಜೊತೆ ಕನ್ನಡದಲ್ಲೇ ಮಾತನಾಡುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಕ.ಸಾ.ಪ ಮಂಗಳೂರು ತಾಲೂಕು ಕಾರ್ಯದರ್ಶಿ ಡಾ ಮುರಲಿ ಮೋಹನ್ ಚೂಂತಾರು ಕರೆ ನೀಡಿದರು.
ಅವರು ನ.8 ಬುಧವಾರದಂದು ಲಯನ್ಸ್ ಮಂದಿರದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲಯನ್ ಚಂದ್ರಹಾಸ ರೈ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಇದರ ಅಧ್ಯಕ್ಷರಾದ ಲಯನ್ ಸೀನ್ ಪೂಜಾರಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಸದಸ್ಯರು ಕನ್ನಡ ಗೀತೆಗಳನ್ನು ಹಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ